Sunday, April 20, 2025
Google search engine

Homeರಾಜ್ಯಸುದ್ದಿಜಾಲಜಾತ್ರಾ ಮಹೋತ್ಸವದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ಕೊಡುವಂತೆ ಮನವಿ

ಜಾತ್ರಾ ಮಹೋತ್ಸವದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ಕೊಡುವಂತೆ ಮನವಿ

ಮಂಗಳೂರು (ದಕ್ಷಿಣ ಕನ್ನಡ): ಕೋಮು ಸೂಕ್ಷ್ಮ ಜಿಲ್ಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಧರ್ಮ ಸಂಘರ್ಷ ಆರಂಭವಾಗಿದೆ. ಕಳೆದ ವರ್ಷದಂತೆ ಈ ವರ್ಷವೂ ಹಿಂದೂ ದೇವಾಲಯಗಳ ಜಾತ್ರಾ ಮಹೋತ್ಸವಕ್ಕೆ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧಿಸಲಾಗುತ್ತಿದೆ. ಮಂಗಳೂರಿನ ದೇವಸ್ಥಾನವೊಂದರಲ್ಲಿ ನವರಾತ್ರಿ ಜಾತ್ರಾ ಮಹೋತ್ಸವದಲ್ಲಿ ಮುಸ್ಲಿಮರ ವ್ಯಾಪಾರಕ್ಕೆ ನಿರ್ಬಂಧಿಸಿರುವ ಬಗ್ಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಾತ್ರೆ ವ್ಯಾಪಾರಸ್ಥರ ಸಮನ್ವಯ ಸಮಿತಿಯು ಜಿಲ್ಲಾಧಿಕಾರಿಗೆ ದೂರು ನೀಡಿದೆ. ಮುಜರಾಯಿ ಇಲಾಖೆ ವ್ಯಾಪ್ತಿಗೆ ಬರುವ ಮಂಗಳಾದೇವಿ ದೇವಸ್ಥಾನದ ನವರಾತ್ರಿ ಉತ್ಸವವು ಅಕ್ಟೋಬರ್ 15 ರಿಂದ 24 ರ ವರೆಗೆ ನಡೆಯಲಿದೆ. ಆದರೆ, ದೇವಸ್ಥಾನದ ಆಡಳಿತ ಮಂಡಳಿಯುವ ಮುಸ್ಲಿಂ ವ್ಯಾಪಾರಿಗಳಿಗೆ ವ್ಯಾಪಾರ ನಡೆಸಲು ಅವಕಾಶ ನಿರಾಕರಿಸಿದೆ. ಸದ್ಯ ನವರಾತ್ರಿ ಸಿದ್ಧತೆ ಹಿನ್ನೆಲೆಯಲ್ಲಿ ಅಂಗಡಿ ಜಾಗದ ಹಂಚಿಕೆ ಪ್ರಕ್ರಿಯೆ ನಡೆಯುತ್ತಿದೆ.

ದೇವಸ್ಥಾನದ ಮುಂಭಾಗದ ರಥಬೀದಿಯಲ್ಲಿ ವ್ಯಾಪಾರ ನಡೆಸಲು ಜಾಗ ಹಂಚಿಕೆ ಮಾಡಲಾಗುತ್ತಿದೆ. ಮಂಗಳೂರು ಮಹಾನಗರ ಪಾಲಿಕೆಗೆ ಸೇರಿದ ಸರ್ಕಾರಿ ರಸ್ತೆ ಇದಾಗಿದೆ. ಆದರೆ, ಹಲವು ವರ್ಷಗಳಿಂದ ಈ ರಸ್ತೆಯ ಬದಿಗಳಲ್ಲಿ ನವರಾತ್ರಿ ಜಾತ್ರಾ ವ್ಯಾಪಾರ ನಡೆಯುತ್ತಾ ಬಂದಿದೆ. ಪಾಲಿಕೆ ರಸ್ತೆಯಾಗಿದ್ದರೂ ಹಲವು ವರ್ಷಗಳಿಂದ ದೇವಸ್ಥಾನದ ಆಡಳಿತದಿಂದಲೇ ವ್ಯಾಪಾರದ ಜಾಗ ಹರಾಜು ಮಾಡಲಾಗುತ್ತಿದೆ. ಸದ್ಯ ಮುಸ್ಲಿಮರ ವ್ಯಾಪಾರಕ್ಕೆ ತಡೆ ಆರೋಪ ಸಂಬಂಧ ದಕ್ಷಿಣ ಕನ್ನಡ ಮತ್ತು ಉಡುಪಿ ಜಾತ್ರೆ ವ್ಯಾಪಾರಸ್ಥರ ಸಮನ್ವಯ ಸಮಿತಿಯು ಜಿಲ್ಲಾಧಿಕಾರಿಗೆ ದೂರು ನೀಡಿದ್ದು, ಜಾತ್ರಾ ಮಹೋತ್ಸವದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ಕೊಡುವಂತೆ ಮನವಿ ಮಾಡಿದ್ದಾರೆ.

RELATED ARTICLES
- Advertisment -
Google search engine

Most Popular