ನಂಜನಗೂಡು : ವೈದ್ಯ ಲೋಕವನ್ನೇ ಬೆರಗಾಗುವಂತಹ ರೂಪ ಹೊಂದಿದ ಮಗುವೊಂದು ನಂಜನಗೂಡಿನ ಹುರಾ ಗ್ರಾಮದ ಸರ್ಕಾರಿ ಆಸ್ಪತ್ರೆಯಲ್ಲಿ ಜನನವಾಗಿದೆ.
ಹುಟ್ಟಿದ ಮಗು ಆರೋಗ್ಯ ಇಲಾಖೆಯನ್ನು ಬೆಚ್ಚಿ ಬೀಳಿಸಿದೆ. ವಿಚಿತ್ರವಾದ ಕಣ್ಣು ಮತ್ತು ತುಟಿ ಮೈಯೆಲ್ಲಾ ಇದ್ದಲಿನಂತೆ ಕಪ್ಪುಬಣ್ಣ, ನೋಡುಗರನ್ನು ಬೆಚ್ಚಿಬೀಳುವಂತಹ ಮಗು ಹುಟ್ಟುವ ಮೂಲಕ ಆರೋಗ್ಯ ಇಲಾಖೆಯನ್ನು ಹುಬ್ಬೇರುವಂತೆ ಮಾಡಿದೆ. ಹುರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಗೆ ಸೇರಿರುವ ಗ್ರಾಮವೊಂದರ ದಂಪತಿಗೆ ಇಂತಹ ರೂಪ ಹೊಂದಿರುವ ಮಗು ಹುಟ್ಟಿದೆ. ಮಗುವಿನ ಆಕಾರ ಮತ್ತು ರೂಪಕ್ಕೆ ಗ್ರಾಮಸ್ಥರು ಮತ್ತು ದಂಪತಿ ಕುಟುಂಬಸ್ಥರು ಶಾಕ್ ಆಗಿದ್ದಾರೆ.
ವಿಚಿತ್ರ ರೂಪದ ಮಗುವನ್ನ ಮೈಸೂರಿನ ಚೆಲುವಾಂಬ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಏಳು ದಿನಗಳ ಕಾಲ ತುರ್ತು ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಿದ್ದಾರೆ. ಕಳೆದ ವರ್ಷ ಇದೇ ದಂಪತಿ ಇಂತದ್ದೇ ರೂಪ ಹೊಂದಿದ ಮಗುವಿಗೆ ಜನ್ಮ ನೀಡಿದ್ದರು, ಆದರೆ, ನಾಲ್ಕೈದು ದಿನಗಳ ನಂತರ ಆ ಮಗು ಸಾವನ್ನಪ್ಪಿತ್ತು. ಮತ್ತೆ ಈ ಬಾರಿಯೂ ಕೂಡ ಇದೇ ರೀತಿ ಇಡೀ ಕುಟುಂಬವನ್ನು ಬೆಚ್ಚಿ ಬೀಳಿಸುವಂತಹ ವಿಚಿತ್ರ ಮಗು ಈ ದಂಪತಿಗೆ ಹುಟ್ಟಿದೆ.