Friday, April 4, 2025
Google search engine

Homeಅಪರಾಧಬೆಂಗಳೂರಲ್ಲಿ ರಸ್ತೆ ದಾಟುವಾಗ ಬೆನ್ಜ್ ಕಾರು ಡಿಕ್ಕಿಯಾಗಿ ಟೆಕ್ಕಿ ಸಾವು

ಬೆಂಗಳೂರಲ್ಲಿ ರಸ್ತೆ ದಾಟುವಾಗ ಬೆನ್ಜ್ ಕಾರು ಡಿಕ್ಕಿಯಾಗಿ ಟೆಕ್ಕಿ ಸಾವು

ಬೆಂಗಳೂರು: ರಸ್ತೆ ದಾಟುವಾಗ ಬೆನ್ಜ್ ಕಾರು ಡಿಕ್ಕಿಯಾಗಿ ಟೆಕ್ಕಿ ಸಂಧ್ಯಾ ಸಾವಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಈ ಬಗ್ಗೆ ಪಶ್ಚಿಮ ವಿಭಾಗದ ಸಂಚಾರ ಡಿಸಿಪಿ ಅನಿತ ಹದ್ದನವರ್ ಮಾತನಾಡಿ, ರಸ್ತೆ ದಾಟಲು ನಿಂತಿದ್ದ ಸಂಧ್ಯಾ ಎನ್ನುವವರಿಗೆ ಬೆನ್ಜ್ ಕಾರು ಡಿಕ್ಕಿಯಾಗಿ ಸಾವನ್ನಪ್ಪಿದ್ದಾರೆ. ಡಿಕ್ಕಿಯಾದ ತಕ್ಷಣ ಸಂಧ್ಯಾರನ್ನು ಬಿಜಿಎಸ್ ಆಸ್ಪತ್ರೆಗೆ ಕರೆದೊಯ್ಯುಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಿದೆ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.

ಆಕ್ಸಿಡೆಂಟ್ ಮಾಡಿ ಎಸ್ಕೇಪ್ ಆಗಲು ಚಾಲಕ ಧನುಷ್ ಯತ್ನಿಸಿದ್ದ. ಸಾರ್ವಜನಿಕರು ಚಾಲಕನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದು, ಆತನನ್ನು ಕೆಂಗೇರಿ ಸಂಚಾರಿ ಪೊಲೀಸರು ಬಂಧಿಸಿದ್ದಾರೆ. ಧನುಷ್ ತಂದೆ ಎಲ್‌ಬಿ ಟ್ರಾವೆಲ್ಸ್ ನಡೆಸುತ್ತಿದ್ದು, ಕಾರು ಎಲ್‌ಬಿ ಟ್ರಾವೆಲ್ಸ್ ಹೆಸರಿನಲ್ಲಿ ನಮೂದಾಗಿದೆ. ಕಾರು ಬೆಂಗಳೂರಿನಿಂದ ಮೈಸೂರು ಕಡೆಗೆ ಹೋಗುತ್ತಿತ್ತು. ಮಹಿಳೆಗೆ ಕಾರು ಡಿಕ್ಕಿಯಾದ ನಂತರ ದ್ವಿಚಕ್ರ ವಾಹನ ಸವಾರನಿಗೂ ಡಿಕ್ಕಿ ಹೊಡೆದಿದ್ದು, ಚಾಲಕ ಸೈಯ್ಯದ್ ಸ್ಥಳೀಯ ಆಸ್ಪತ್ರೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ನಾಗರಬಾವಿ ನಿವಾಸಿಯಾಗಿರುವ ಧನುಷ್, ಖಾಸಗಿ ಕಾಲೇಜ್‌ನಲ್ಲಿ ಬಿಇ 5 ನೇ ತ್ರೈಮಾಸಿಕ ವಿದ್ಯಾರ್ಥಿಯಾಗಿದ್ದಾನೆ. ಧನುಷ್ ಸೇರಿ ಮೂರು ಜನ ಸ್ನೇಹಿತರು ಪಾರ್ಟಿ ಮುಗಿಸಿ ಮನೆಗೆ ತೆರಳುವ ವೇಳೆ ಈ ಘಟನೆ ಸಂಭವಿಸಿದೆ. ಅಪಘಾತ ವೇಳೆ ಪೊಲೀಸರು ಡಿಡಿ ಪರಿಶೀಲನೆ ಮಾಡಿದ್ದು, ಅದರಲ್ಲಿ ಮದ್ಯ ಸೇವನೆ ಮಾಡಿರುವುದು ಪತ್ತೆಯಾಗಿದೆ. ಆ ಹಿನ್ನೆಲೆ ಕಾರು ಚಾಲಕನನ್ನು ಪೊಲೀಸರು ವಿಕ್ಟೋರಿಯಾ ಆಸ್ಪತ್ರೆ ಕರೆದೊಯ್ದು ರಕ್ತ ಮಾದರಿ ಸಂಗ್ರಹಿಸಿದ್ದಾರೆ.

ಕೆಲಸ ಮುಗಿಸಿ ಮನೆಗೆ ಹೊರಟಿದ್ದ ವೇಳೆ ಟೆಕ್ಕಿ ಸಂಧ್ಯಾಗೆ ಅಪಘಾತದಿಂದ ಸಾವು ಸಂಭವಿಸಿದೆ. ಶನಿವಾರ ರಾತ್ರಿ 9 ಗಂಟೆ ಆದ್ದರಿಂದ ಕುಡಿದು ಅತಿ ವೇಗವಾಗಿ ವಾಹನ ಚಾಲನೆ ಮಾಡಿದ್ದೇ ದುರಂತಕ್ಕೆ ಕಾರಣವಾಗಿದೆ. ಸದ್ಯ ಪ್ರಕರಣ ದಾಖಲು ಮಾಡಿಕೊಂಡಿರುವ ಕೆಂಗೇರಿ ಸಂಚಾರಿ ಪೊಲೀಸರಿಂದ ತನಿಖೆ ಮುಂದುವರೆದಿದೆ.

RELATED ARTICLES
- Advertisment -
Google search engine

Most Popular