ತುಮಕೂರು: ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನಲ್ಲಿ ಅರಸಾಪುರ ಗೇಟ್ ಬಳಿ ಇಂದು ನಡೆದಿದೆ.
ಮೃತರನ್ನು ಪವನ್ (೨೦), ಬಾಲಾಜಿ (೧೮), ಅನಿತಾ (೪೦) ಎಂದು ಗುರುತಿಸಲಾಗಿದೆ. ಮಧುಗಿರಿಯಿಂದ ಗೌರಿಬಿದನೂರು ಕಡೆಗೆ ಹೋಗುವಾಗ ಅವಘಡ ಸಂಭವಿಸಿದೆ. ತಾಯಿ ಮಗ ಹಾಗೂ ಅಣ್ಣನ ಮಗ ದುರಂತದಲ್ಲಿ ಮೃತಪಟ್ಟಿದ್ದಾರೆ. ಮೃತರೆಲ್ಲ ಮಧುಗಿರಿ ಮೂಲದ ವೀರೇನಹಳ್ಳಿ ತಾಂಡಾದ ವಾಸಿಗಳಾಗಿದ್ದಾರೆ. ಅಪಘಾತದ ಬಳಿಕ ಲಾರಿ ಚಾಲಕ ಘಟನಾ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಕೊರಟಗೆರೆ ಸಬ್‌ಇಸ್ಪೆಕ್ಟರ್ ಚೇತನ್ ಕುಮಾರ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂಬಂಧ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.