ಮಹಾರಾಷ್ಟ್ರ: ಮಹಾಕುಂಭಮೇಳಕ್ಕೆ ಭಕ್ತರನ್ನು ಕರೆದೊಯ್ಯುತ್ತಿದ್ದ ತಪತಿ ಗಂಗಾ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಿಡಿಗೇಡಿಗಳು ಕಲ್ಲೆಸೆದಿರುವ ಘಟನೆ ಮಹಾರಾಷ್ಟ್ರದ ಜಲಗಾಂವ್ ರೈಲು ನಿಲ್ದಾಣದ ಬಳಿ ಭಾನುವಾರ(ಜ.12) ಸಂಭವಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಬರೋಬ್ಬರಿ 144 ವರ್ಷಗಳಿಗೊಮ್ಮೆ ನಡೆಯುವ ಮಹಾಕುಂಭಮೇಳ ಇಂದಿನಿಂದ ಆರಂಭಗೊಂಡು 44 ದಿನಗಳ ಕಾಲ ನಡೆಯಲಿದೆ ಅದರಂತೆ ದೇಶದಾದ್ಯಂತ ಭಕ್ತರು ಈ ಒಂದು ಧಾರ್ಮಿಕ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ.
ಅದರಂತೆ ಸೂರತ್‌ನಿಂದ ಛಾಪ್ರಾಕ್ಕೆ ಭಕ್ತರನ್ನು ಕರೆದೊಯ್ಯುತ್ತಿದ್ದ ತಪತಿ ಗಂಗಾ ಎಕ್ಸ್‌ಪ್ರೆಸ್ ರೈಲಿಗೆ ಮಹಾರಾಷ್ಟ್ರದ ಜಲಗಾಂವ್ ರೈಲು ನಿಲ್ದಾಣದ ಬಳಿ ಕಿಡಿಗೇಡಿಗಳು ಕಲ್ಲೆಸೆದಿದ್ದಾರೆ. ಘಟನೆಯಿಂದ ಕಿಟಕಿಯ ಗಾಜು ಪುಡಿಪುಡಿಯಾಗಿದ್ದು ಯಾರಿಗೂ ಗಾಯಗಳಾದ ಬಗ್ಗೆ ವರದಿಯಾಗಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಘಟನೆ ಸಂಬಂಧ ಜಲಗಾಂವ್ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಕಲ್ಲೆಸೆದಿರುವ ದುಷ್ಕರ್ಮಿಗಳ ಪತ್ತೆಗೆ ಬಲೆ ಬೀಸಿದ್ದಾರೆ.