ಮರಣದ ನಂತರವೂ ಜೀವಿಸಿರುವ ಪುನೀತ್ : ನಾರಾಯಣ ಗೌಡ
ಮೈಸೂರು: ನ್ಯೂ ಸಯ್ಯಾಜಿರಾವ್ ರಸ್ತೆಯಲ್ಲಿರುವ ಜೀವದಾರ ರಕ್ತ ನಿಧಿ ಕೇಂದ್ರದಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹುಟ್ಟು ಹಬ್ಬದ ಅಂಗವಾಗಿ 25 ಜನ ಅಭಿಮಾನಿಗಳು ಸ್ವಯಂ ಪ್ರೇರಿತ ರಕ್ತದಾನವನ್ನು ಮಾಡುವ ಮೂಲಕ ಅರ್ಥಪೂರ್ಣವಾಗಿ ಪುನೀತ್ ರಾಜಕುಮಾರ್ ಹುಟ್ಟು ಹಬ್ಬವನ್ನು ಆಚರಿಸಲಾಯಿತು.
ನಂತರ ಮಾತನಾಡಿದ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರಾದ ನಾರಾಯಣಗೌಡ ಜನನವಾದ ಮೇಲೆ ಮರಣ ನಿಶ್ಚಿತ. ಮರಣಿಸಿದ ನಂತರವೂ ಜನರ ಮನಸ್ಸಿನಲ್ಲಿ ಜೀವಂತ ವಾಗಿರುವಂತೆ ಬದುಕಬೇಕು. ಅಂಥ ಬದುಕು ಪುನೀತ್ ರಾಜ್‌ಕುಮಾರ್ ಅವರದ್ದಾಗಿತ್ತು ಎಂದು ಹೇಳಿದರು.
ನಂತರ ಮಾತನಾಡಿದ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷರಾದ ಲಿಂಗರಾಜು ಪುನೀತ್ ಸಮಾಜ ಸೇವೆಯಲ್ಲೂ ತೊಡಗಿದ್ದರು. ಅವರ ಅಭಿಮಾನಿಗಳು ಅವರಂತೆ ಒಳ್ಳೆಯ ಕೆಲಸ ಮಾಡುವ ಸಂಕಲ್ಪ ಕೈಗೊಳ್ಳಬೇಕು ಎಂದರು.
ಸನ್ಮಾನ್ಯ ಪುನೀತ್ ರಾಜ್‍ಕುಮಾರ್ ಅವರು ತಮ್ಮ ಚಿತ್ರಗಳಲ್ಲಿ ಸಮಾಜಕ್ಕೆ ಒಳ್ಳೆಯ ಸಂದೇಶಗಳನ್ನು ನೀಡುತ್ತಿದ್ದರಲ್ಲದೇ, ಎಲೆಮರೆಯ ಕಾಯಿಯಂತೆ ಅನೇಕ ಸಮಾಜಮುಖಿ ಕಾರ್ಯಗಳನ್ನು ಮಾಡಿದ್ದು, ಇಂದಿನ ಯುವ ಪೀಳಿಗೆಗೆ ಆದರ್ಶ ಪ್ರಾಯರಾಗಿದ್ದಾರೆ ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರಾದ ನಾರಾಯಣಗೌಡ, ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷರಾದ ಲಿಂಗರಾಜು, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕರಾದ ಗಿರೀಶ್, ಸಮಾಜ ಸೇವಕರಾದ ಖುಷಿ ವಿನು, ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್,ಸವಿತಾ ಘಾಟ್ಕೆ, ವಕೀಲರಾದ ಜಯಶ್ರೀ ಶಿವರಾಮ್, ಮಹಾನ್ ಶ್ರೇಯಸ್, ಹೇಮಾ, ಪವನ್ ಹಾಗೂ ಇನ್ನಿತರರು ಹಾಜರಿದ್ದರು.