ನೂತನ ಸಿಎಂ ಸೋರೆನ್ ರೊಂದಿಗೆ ಇಬ್ಬರು ಸಚಿವರು ಪದಗ್ರಹಣ
ರಾಂಚಿ: ಜಾರ್ಖಂಡ್‌ನಲ್ಲಿ ಚಂಪೈ ಸೋರೆನ್ ನೇತೃತ್ವದ ಸಮ್ಮಿಶ್ರ ಸರ್ಕಾರವು ಫೆಬ್ರವರಿ 5 ರಂದು ವಿಶ್ವಾಸ ಮತಯಾಚಿಸಲಿದೆ ಎಂದು ಸಚಿವ ಅಲಂಗೀರ್ ಆಲಂ ಅವರು ಶುಕ್ರವಾರ ನಡೆದ ಮೊದಲ ಸಂಪುಟ ಸಭೆಯ ನಂತರ ತಿಳಿಸಿದ್ದಾರೆ.
ಜೆಎಂಎಂ ಶಾಸಕಾಂಗ ಪಕ್ಷದ ನಾಯಕ ಚಂಪೈ ಸೋರೆನ್ ಅವರು ಇಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ತಮ್ಮ ನೇತೃತ್ವದಲ್ಲಿ ಮೊದಲ ಸಚಿವ ಸಂಪುಟ ಸಭೆ ನಡೆಸಿದರು.
ಮುಖ್ಯಮಂತ್ರಿ ಚಂಪೈ ಸೋರೆನ್ ಅಧ್ಯಕ್ಷತೆಯಲ್ಲಿ ನಡೆದ ಮೊದಲ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.
ರಾಜಭವನದಲ್ಲಿ ರಾಜ್ಯಪಾಲ ಸಿ ಪಿ ರಾಧಾಕೃಷ್ಣನ್ ಅವರು ನೂತನ ಸಿಎಂ ಸೋರೆನ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಅವರೊಂದಿಗೆ ಹಿರಿಯ ಕಾಂಗ್ರೆಸ್ ನಾಯಕ ಅಲಂಗೀರ್ ಆಲಂ ಮತ್ತು ಆರ್‌ಜೆಡಿ ನಾಯಕ ಸತ್ಯಾನಂದ್ ಭೋಕ್ತಾ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.