Friday, April 18, 2025
Google search engine

Homeಅಪರಾಧನೈಜೀರಿಯಾ ಮೂಲದ ಮಹಿಳೆ ಬಂಧಿಸಿ ₹24 ಕೋಟಿ ಮೌಲ್ಯದ ನಿಷೇಧಿತ ಮಾದಕವಸ್ತು ಜಪ್ತಿ

ನೈಜೀರಿಯಾ ಮೂಲದ ಮಹಿಳೆ ಬಂಧಿಸಿ ₹24 ಕೋಟಿ ಮೌಲ್ಯದ ನಿಷೇಧಿತ ಮಾದಕವಸ್ತು ಜಪ್ತಿ

ಬೆಂಗಳೂರು: ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಮಾದಕ ದ್ರವ್ಯ ನಿಗ್ರಹ ದಳ ಹಾಗೂ ಕೆ.ಆರ್‌.ಪುರ ಪೊಲೀಸರು ಕಾರ್ಯಾಚರಣೆ ನಡೆಸಿ, ಡ್ರಗ್ಸ್‌ ಮಾರಾಟ ಮಾಡುತ್ತಿದ್ದ ನೈಜೀರಿಯಾ ಮೂಲದ 40 ವರ್ಷದ ಮಹಿಳೆಯನ್ನು ಬಂಧಿಸಿ ₹24 ಕೋಟಿ ಮೌಲ್ಯದ ಮಾದಕವಸ್ತುಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ.

‘ಬಂಧಿತ ಮಹಿಳೆಯಿಂದ 12 ಕೆ.ಜಿ ಎಂಡಿಎಂಎ ಕ್ರಿಸ್ಟಲ್, ಒಂದು ಮೊಬೈಲ್, 70 ಏರ್‌ಟೇಲ್ ಸಿಮ್‌ ಕಾರ್ಡ್‌ಗಳನ್ನು ಜಪ್ತಿ ಮಾಡಲಾಗಿದೆ. ಇವುಗಳ ಮೌಲ್ಯ ₹24 ಕೋಟಿ ಎಂದು ಅಂದಾಜಿಸಲಾಗಿದೆ’ ಎಂದು ಪೊಲೀಸರು ಹೇಳಿದ್ದಾರೆ.

‘ಬೆಂಗಳೂರಿನ ಟಿ.ಸಿ. ಪಾಳ್ಯದಲ್ಲಿ ತಂಗಿದ್ದ ಶಂಕಿತ ಮಹಿಳೆಯ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ’ ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಬಿ. ದಯಾನಂದ ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಈವರೆಗೆ ನಡೆಸಿದ ಅತಿದೊಡ್ಡ ಡ್ರಗ್ಸ್‌ ಕಾರ್ಯಾಚರಣೆ ಇದಾಗಿದೆ. ಪ್ರಕರಣ ಸಂಬಂಧ ತಲೆಮರೆಸಿಕೊಂಡಿರುವ ಮತ್ತೋರ್ವ ವಿದೇಶಿ ಮಹಿಳೆಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular