ಗದಗ: ಕೃಷಿ ಹೊಂಡದಲ್ಲಿ ಬಿದ್ದು ಮಹಿಳೆ ಹಾಗೂ ಮಗುವೊಂದು ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹೈತಾಪುರ ಗ್ರಾಮದಲ್ಲಿ ನಡೆದಿದೆ.
ಗೀತಾ ಹೆಸರೂರು(೩೪) ಹಾಗೂ ಮನೋಜ್ ಕವಲೂರು(೫) ಮೃತರ್ದುದೈವಿಗಳು. ತಂಗಿ ಮಗನ ಜೊತೆ ನೀರು ತರಲು ಹೋಗಿದ್ದಾಗ ಮನೋಜ್ ಕೃಷಿಹೊಂಡಕ್ಕೆ ಕಾಲು ಜಾರಿ ಬಿದ್ದಿದ್ದಾನೆ. ಈ ವೇಳೆ ರಕ್ಷಣೆಗೆ ಹೋಗಿದ್ದ ಗೀತಾ ಕೂಡ ಸಾವನ್ನಪ್ಪಿದ್ದಾನೆ. ಶಾಲೆ ರಜೆ ಹಿನ್ನೆಲೆ ಮನೋಜ್ ದೊಡ್ಡಮ್ಮನ ಮನೆಗೆ ಬಂದಿದ್ದಾಗ ಈ ದುರ್ಘಟನೆ ನಡೆದಿದೆ. ಈ ಕುರಿತು ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.