ಚಿಕ್ಕಬಳ್ಳಾಪುರ: ಗಣೇಶನ ಮುಂದೆ ಡ್ಯಾನ್ಸ್ ಮಾಡಬೇಡ ಎಂದಿದ್ದಕ್ಕೆ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಚಿಕ್ಕಪ್ಯಾಯಲಗುರ್ಕಿ ಗ್ರಾಮದಲ್ಲಿ ನಡೆದಿದೆ. ಗಿರೀಶ್ (21) ಮೃತ ದುರ್ದೈವಿ.
ಗಣೇಶೋತ್ಸವದಲ್ಲಿ ಡ್ಯಾನ್ಸ್ ಮಾಡದಂತೆ ಅಮ್ಮ ಮತ್ತು ಅಣ್ಣ ಬುದ್ದಿಮಾತು ಹೇಳಿದ್ದಾರೆ. ಇದರಿಂದ ನೊಂದ ಗಿರೀಶ್ ಗ್ರಾಮದ ಮುತ್ತುರಾಯಸ್ವಾಮಿ ದೇವಾಲಯದ ಬಳಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪೆರೇಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.