Thursday, April 10, 2025
Google search engine

Homeಅಪರಾಧಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ

ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ

ಭರಮಸಾಗರ: ಬಾಲಕಿಯೊಬ್ಬಳು ಮನೆಯಲ್ಲಿ ಯಾರು ಇಲ್ಲದ ವೇಳೆ ನಿಗೂಢವಾಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಸಮೀಪದ ಹಳವುದರ ಲಂಬಾಣಿ ಹಟ್ಟಿ ಗ್ರಾಮದ ಸಂಜನಾ (14) ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ಗ್ರಾಮದ ಬೇಬಿಬಾಯಿ ಮತ್ತು ಪೊನ್ಯನಾಯ್ಕ್ ಎಂಬುವರ ಮಗಳಾದ ಸಂಜನಾ ಕರಿಯಮ್ಮನಹಟ್ಟಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಎಂಟನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು.

ಮನೆಯಲ್ಲಿ ಯಾರು ಇಲ್ಲದ ವೇಳೆ ಸೀರೆಯಿಂದ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಭರಮಸಾಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಿರಿಗೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಮೃತ ಬಾಲಕಿ ಶವದ ಮರಣೋತ್ತರ ಪರೀಕ್ಷೆ ನಡೆಸಿ ಪೋಷಕರಿಗೆ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular