ನವದೆಹಲಿ: ಸಂಸತ್‌ನ ಉಭಯ ಸದನಗಳಲ್ಲಿ ಅನುಮೋದನೆಗೊಂಡ ವಕ್ಫ್ ತಿದ್ದುಪಡಿ ಮಸೂದೆ ವಿರುದ್ಧ ಆಮ್ ಆದ್ಮಿ ಪಕ್ಷ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.
ಆಪ್ ಶಾಸಕ, ದೆಹಲಿ ವಕ್ಫ್ ಮಂಡಳಿಯ ಅಧ್ಯಕ್ಷ ಅಮಾನತ್-ಉಲ್ಲಾ-ಖಾನ್ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಮಸೂದೆಯು ಮುಸ್ಲಿಮರ ಧಾರ್ಮಿಕ ಮತ್ತು ಸಾಂಸ್ಕೃತಿಕ ಸ್ವಾಯತ್ತತೆಯನ್ನು ಮೊಟಕುಗೊಳಿಸುತ್ತದೆ. ಅನಿಯಂತ್ರಿತ ಕಾರ್ಯಾಂಗ ಹಸ್ತಕ್ಷೇಪಕ್ಕೆ ಅನುವು ಮಾಡಿಕೊಡುತ್ತದೆ. ಧಾರ್ಮಿಕ ಮತ್ತು ದತ್ತಿ ಸಂಸ್ಥೆಗಳನ್ನು ನಿರ್ವಹಿಸಲು ಅಲ್ಪಸಂಖ್ಯಾತರ ಹಕ್ಕುಗಳನ್ನು ದುರ್ಬಲಗೊಳಿಸುತ್ತದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.
ವಕ್ಫ್ ತಿದ್ದುಪಡಿ ಮಸೂದೆಯು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಅಂಗೀಕಾರಗೊಂಡಿತು. ಉಭಯ ಸದನಗಳಲ್ಲಿ ಸುದೀರ್ಘ ಚರ್ಚೆ ಮೂಲಕ ಮಸೂದೆ ಪಾಸ್ ಆಯಿತು. ಮಸೂದೆಯನ್ನು ಎನ್‌ಡಿಎ ನೇತೃತ್ವದ ಕೇಂದ್ರ ಸರ್ಕಾರ ಸಮರ್ಥಿಸಿಕೊಂಡಿದೆ. ಆದರೆ, ಇದು ಸಂವಿಧಾನಬಾಹಿರ ಎಂದು ವಿಪಕ್ಷಗಳು ಬಿಲ್‌ಗೆ ವಿರೋಧ ವ್ಯಕ್ತಪಡಿಸಿವೆ.