ಮಂಗಳೂರು (ದಕ್ಷಿಣ ಕನ್ನಡ): ಮಂಗಳೂರಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಹಣದ ದುರ್ಬಳಕೆಯಾಗಿದೆ. ಹೀಗಾಗಿ ಸ್ಮಾರ್ಟ್ ಯೋಜನೆಯಲ್ಲಿ ಆಗಿರುವ ಕಾಮಗಾರಿ ಬಗ್ಗೆ ಶ್ವೇತ ಪತ್ರ ಹೊರಡಿಸುವಂತೆ ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಆಗ್ರಹಿಸಿದ್ದಾರೆ.
ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಈ ಯೋಜನೆಗೆ ಎಷ್ಟು ಹಣ ಬಿಡುಗಡೆಯಾಗಿದೆ? ಖರ್ಚಾಗಿರುವುದು ಎಷ್ಟು ಎಂಬ ವಿಚಾರದ ಬಗ್ಗೆ ಮಾಹಿತಿಯನ್ನು ಸರಕಾರ ಜನರ ಮುಂದಿಡಬೇಕು ಎಂದರು.
ಮಂಗಳೂರು ಮಹಾನಗರ ಪಾಲಿಕೆಯ ಅವಧಿ ಫೆಬ್ರವರಿಯಲ್ಲಿ ಮುಗಿಯುತ್ತದೆ. ಯಾವುದೇ ಕಾರಣಕ್ಕೂ ಚುನಾವಣೆಯನ್ನು ಮುಂದೂಡದೆ ನಿಗದಿತ ಸಮಯದಲ್ಲಿ ಚುನಾವಣೆ ನಡೆಸುವಂತೆ ರಾಜ್ಯ ಸರಕಾರವನ್ನು ಒತ್ತಾಯಿಸಿದರು.