ಮಂಡ್ಯ: ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿರುವ ಸ್ಮಶಾನಗಳ ಮುಂದೆ ಸಾರ್ವಜನಿಕ ಸ್ಮಶಾನ ಎಂದು ಪಲಕ ಅನಾವರಣಗೊಳ್ಳಬೇಕು. ಅಲ್ಲಿ ಯಾವುದೇ ಜಾತಿ, ಮತದ ಬೇಧವಿಲ್ಲದೇ ಎಲ್ಲರಿಗೂ ಮುಕ್ತ ಅವಕಾಶ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಗಳ ವೃತ್ತಿ ನಿಷೇಧ ಮತ್ತು ಅವರ ಪುನರ್ ವಸತಿ ಕಾಯ್ದೆ ಸಂಬಂಧ ಸಭೆ ನಡೆಸಿ ಮಾತನಾಡಿದರು. ಸಭೆಗಳಲ್ಲಿ ಮುಖಂಡರುಗಳು ಪೌರಕಾರ್ಮಿಕರು, ಸಫಾಯಿ ಕರ್ಮಚಾರಿಗಳು ಎಂದು ಸ್ಮಶಾನದಲ್ಲ್ಲಿ ಅಂತ್ಯಕ್ರಿಯೆ ನಡೆಸಲು, ಓಡಾಡಲು ರಸ್ತೆಯಲ್ಲಿ ಅವಕಾಶ ನೀಡುವುದಿಲ್ಲ ಎಂದು ದೂರುಗಳು ಕೇಳಿ ಬರುತ್ತಿದೆ. ಇದನ್ನು ಗಂಭೀರವಾಗಿ ಪರಿಗಣಿಸಿ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಚ್ಚರಿಕೆ ನೀಡಿದರು.
ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಚರ್ಚಿಸಲಾಗುವ ವಿಷಯಗಳ ಬಗ್ಗೆ ಸಂಬಂಧಿಸಿದ ಕಚೇರಿಯೊಂದಿಗೆ ಸಮನ್ವಯ ಸಾಧಿಸಿ ಮುಂದಿನ ಸಭೆಯೊಳಗೆ ಸಮಸ್ಯೆಗಳು ಪರಿಹಾರವಾಗಬೇಕು. ವರ್ಷಾನುಗಟ್ಟಲೇ ಒಂದೇ ಸಮಸ್ಯೆ ಸಭೆಯಲ್ಲಿ ಚರ್ಚಿಸಿದರೆ ಅಧಿಕಾರಿಗಳು ಸಮಸ್ಯೆಗೆ ಸ್ಪಂದುಸುತ್ತಿಲ್ಲ ಎಂಬ ಅಭಿಪ್ರಾಯ ಮೂಡುತ್ತದೆ ಎಂದರು. ಶ್ರೀರಂಗಪಟ್ಟಣ ಟೌನ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ನಿವೇಶನ ಕಲ್ಪಿಸಲು ಮೊದಲು ತಹಶೀಲ್ದರ್ ಕಚೇರಿ ಅವರು ಸರ್ಕಾರಿ ಸ್ಥಳ ಲಭ್ಯತೆಯ ಬಗ್ಗೆ ಪರಿಶೀಲಿಸಿ ಲಭ್ಯವಿಲ್ಲದಿದ್ದಲ್ಲಿ ಖಾಸಗಿ ಜಮೀನು ಲಭ್ಯತೆಯನ್ನು ಗುರುತಿಸಿ ಖರೀದಿಗಾಗಿ ಪ್ರಸ್ತಾವನೆ ಸಲ್ಲಿಸಿ ಎಂದರು.
ಅರಿವು ಕಾರ್ಯಕ್ರಮ ಆಯೋಜಿಸಿ ಮ್ಯಾನುಯಲ್ ಸ್ಕ್ಯಾವೆಂಜರ್ ವೃತ್ತಿ ನಿಷೇಧ ಸಂಬಂಧ ಗುರುತಿಸಲಾದ ಮ್ಯಾನುಯಲ್ ಸ್ಕ್ಯಾವೆಂಜರ್ ಗಳಗಿ ಸರ್ಕಾರದಿಮದ ಸೌಲಭ್ಯಗಳ ಬಗ್ಗೆ ತಾಲ್ಲೂಕುವಾರು ಅರಿವು ಕಾರ್ಯಕ್ರಮ ನಡೆಸಿ, ಅವರಿಗೆ ಸೌಲಭ್ಯ ಒದಗಿಸಿ ಮುಖ್ಯವಾಹಿನಿಗೆ ತರಬೇಕು ಎಂದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್ ಅವರು ಮಾತನಾಡಿ ಡಾ: ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಪೌರ ಕಾರ್ಮಿಕರಿಗೆ ನೀಡಲಾಗುವ ಸಾಲ ಯೋಜನೆಗಳಿಗೆ ಸಿವಿಲ್ ಸ್ಕೋರ್ ಇಲ್ಲ ಎಂದು ಬ್ಯಾಂಕ್ ನಲ್ಲಿ ಸಾಲ ನೀಡದಿರುವ ಪ್ರಕರಣಗಳಿದ್ದರೆ ಅವುಗಳ ಬಗ್ಗೆ ಲೀಡ್ ಬ್ಯಾಂಕಿಗೆ ಪತ್ರ ಬರೆದು ಪರಿಹರಿಸಲಾಗುವುದು ಎಂದರು.
ಸಮಿತಿಯ ಸದಸ್ಯರಾದ ನಂಜುಂಡ ಮೌರ್ಯ ಹಾಗೂ ಆರ್. ಕೃಷ್ಣ ಅವರು ಸಫಾಯಿ ಕರ್ಮಚಾರಿಗಳಿಗೆ ಉಂಟಾಗಿರುವ ಸಮಸ್ಯೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಿದರು. ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಎನ್ ಯತೀಶ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಸಿದ್ದಲಿಂಗೇಶ್, ಉಪವಿಭಾಗಾಧಿಕಾರಿ ಶಿವ ಮೂರ್ತಿ, ನಂದೀಶ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ತುಷರಾಮಣಿ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.