Friday, April 18, 2025
Google search engine

Homeರಾಜ್ಯಬಾಲಕಾರ್ಮಿಕ ಪದ್ದತಿಯನ್ನು ತೊಲಗಿಸಿ : ನ್ಯಾ. ಅನಿತಾ

ಬಾಲಕಾರ್ಮಿಕ ಪದ್ದತಿಯನ್ನು ತೊಲಗಿಸಿ : ನ್ಯಾ. ಅನಿತಾ

ರಾಮನಗರ:ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನವನ್ನು ನಾವು ಇನ್ನು ಆಚರಿಸಬೇಕಾ ಎಂದು ನಮಗೆ ನಾವು ಚಿಂತನೆಯನ್ನು ತೊಡಗಿಸಿಕೊಳ್ಳಬೇಕಾಗುತ್ತದೆ. ಜಿಲ್ಲೆ, ರಾಜ್ಯ, ರಾಷ್ಟç ಹಾಗೂ ಅಂತರರಾಷ್ಟಿçÃಯ ಮಟ್ಟದಲ್ಲಿಯೂ ಸಹ ಮಕ್ಕಳನ್ನು ದುಡಿಮೆಗೆ ತಳ್ಳಲಾಗುತ್ತಿದ್ದು, ಅವರಿಗೆ ಕಡ್ಡಾಯ ಹಾಗೂ ಉಚಿತ ಶಿಕ್ಷಣ ನೀಡುವ ಮೂಲಕ ಬಾಲ ಕಾರ್ಮಿಕ ಪದ್ದತಿಯನ್ನು ತೊಲಗಿಸಿ ಎಂದು ಹಿರಿಯ ಸಿವಿಲ್ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಿದ ಸದಸ್ಯ ಕಾರ್ಯದರ್ಶಿ ಅನಿತಾ ಎನ್.ಪಿ ಅವರು ತಿಳಿಸಿದರು.

ಅವರು ಇಂದು ರಾಮನಗರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾದಿಕಾರ, ಕಾರ್ಮಿಕ ಇಲಾಖೆ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ, ಶಾಲಾ ಶಿಕ್ಷಣ ಮತ್ತು ಸಾಕ್ಷಾರತಾ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಸಭೆಯನ್ನು ಉದ್ಫಾಟಿಸಿ ಮಾತನಾಡಿದರು.

ಬಾಲ್ಯಾವಸ್ಥೆಯ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ ಪದ್ದತಿಯು ಮಕ್ಕಳನ್ನು ದೈಹಿಕವಾಗಿ, ನೈತಿಕವಾಗಿ, ಮಾನಸಿಕವಾಗಿ ಹಾಗೂ ಆರ್ಥಿಕವಾಗಿ ಶೋಷಣೆಗೆ ಒಳಪಡಿಸಿ ಅವರ ಶಿಕ್ಷಣ ಹಾಗೂ ಸರ್ವಾಂಗೀಣ ಪ್ರಗತಿಯ ಅವಕಾಶಗಳನ್ನು ತಡೆಗಟ್ಟುತ್ತಿದ್ದು, ಶಿಕ್ಷಣ ವಂಚಿತ ಹಾಗೂ ದುಡಿಮೆಯಲ್ಲಿ ತೊಡಗಿರುವ ಈ ಮಕ್ಕಳನ್ನು ರಾಷ್ಟçದ ಮುಖ್ಯವಾಹಿನಿಗೆ ಕರೆ ತರಲು ಸರ್ಕಾರ, ಸರ್ಕಾರೇತರ ಸಂಸ್ಥೆಗಳು ಹಾಗೂ ಸಾರ್ವಜನಿಕರು ಸಂಘಟಿತರಾಗಿ ಪ್ರಯತ್ನಿಸಬೇಕಾಗಿದೆ ಎಂದರು.

ಬಾಲಕಾರ್ಮಿಕ ಪದ್ದತಿಯನ್ನು ವಿರೋಧಿಸಲು ಅನೇಕ ಕಾನೂನು ಇವೆ, ಕುಟುಂಬದಲ್ಲಿ ನಿರ್ಲಕ್ಷತೆಗೆ ಒಳಗಾಗಿರುವ ಮಗುವನ್ನು ಬಾಲಕಾರ್ಮಿಕ ಪದ್ದತಿಗೆ ಬಳಸಿಕೊಳ್ಳುವುದು ಮತ್ತು ಮಕ್ಕಳನ್ನು ದುಡಿಮೆಗೆ ತೊಡಗಿಸಿಕೊಳ್ಳುವಂತಹ  ಕೆಲಸಗಳು ನಡೆಯುತ್ತಿದ್ದು ಬಾಲಕಾರ್ಮಿಕ ಪದ್ದತಿಯನ್ನು ನಿರ್ಮೂಲನೆ ಮಾಡಲು ಅರಿವು ಮೂಡಿಸುವಂತಹ ಕಾರ್ಯಗಳಾಗಬೇಕು, ಆಗ ಮಾತ್ರ ಬಾಲಕಾರ್ಮಿಕ ಪದ್ದತಿಯನ್ನು ನಿರ್ಮೂಲನೆ ಮಾಡಲು ಸಾಧ್ಯವೆಂದರು. 16 ವರ್ಷದವರೆಗೆ ಶಿಕ್ಷಣ ನೀಡಿ ಅವರ ವಿದ್ಯೆಗೆ ಅನುಸಾರವಾಗಿ ಉದ್ಯೋಗ ನೀಡಬೇಕು ಎಂದರು. 

14 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ತೊಡಗಿಸಿಕೊಳ್ಳುವುದು ಶಿಕ್ಷಾರ್ಯ ಹಾಗೂ ಸಂಜ್ಞೆಯ (ವಾರೆಂಟ್ ರಹಿತ ಬಂದಿಸಬಹುದಾದ) ಅಪರಾಧವಾಗಿದ್ದು ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕರನ್ನು ಕೆಲಸಕ್ಕೆ ನಿಯೋಜಿಸಿಕೊಂಡಲ್ಲಿ ಅಂತಹ ಅಪರಾಧಕ್ಕೆ ಮಾಲೀಕರಿಗೆ 6 ತಿಂಗಳಿAದ 2 ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ 20 ಸಾವಿರ ರಿಂದ 50 ಸಾವಿರಗಳವರೆಗೆ ದಂಡ ಅಥವಾ ಎರಡನ್ನು ವಿಧಿಸಲು ಅವಕಾಶವಿರುತ್ತದೆ. ಪುನರಾವರ್ತಿತ ಅಪರಾಧಕ್ಕೆ 1 ವರ್ಷದಿಂದ 3 ವರ್ಷಗಳ ವರೆಗೆ ಜೈಲು ಶಿಕ್ಷೆ ವಿಧಿಸಲು ಅವಕಾಶವಿರುತ್ತದೆ. ಕಾರ್ಮಿಕ ಪದ್ದತಿಯನ್ನು ಪ್ರೋತ್ಸಾಹಿಸುವಂತಹ ಪೋಷಕರಿಗೆ ಸಹ ಶಿಕ್ಷೆ ವಿಧಿಸಲು ಅವಕಾಶವಿರುತ್ತದೆ ಎಂದು ತಿಳಿಸಿದರು.

ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಮಕ್ಕಳನ್ನು ಹೋಟೆಲ್, ಅಂಗಡಿ, ಕಂಪನಿ ,ಕಾರ್ಖಾನೆ ಹಾಗೂ ಉದ್ದಿಮೆಗಳಲ್ಲಿ ಬಳಸಿಕೊಳ್ಳುತ್ತಿರುವುದು  ಕಂಡು ಬಂದಲ್ಲಿ ಕೂಡಲೇ ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ, ಕಂದಾಯ ಇಲಾಖೆ, ಪಂಚಾಯತ್ ರಾಜ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ, ಕಾರ್ಖಾನೆ ಮತ್ತು ಬಾಯ್ಲರ್ ಇಲಾಖೆ, ನಗರಾಭಿವೃದ್ಧಿ ಇಲಾಖೆ, ರೇಷ್ಮೆ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣಿ ಇಲಾಖೆ, ಕೃಷಿ ಇಲಾಖೆ, ಹಾಗೂ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಗೆಯನ್ನು ಸಂಪರ್ಕಿಸಿ ದೂರು ನೀಡಬಹುದು ಅಥವಾ ಸಹಾಯವಾಣಿ 1098 ಗೆ ಕರೆ ಮಾಡಿ ದೂರನ್ನು ನೀಡಬಹುದು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋದಿ ದಿನದ ಪ್ರತಿಜ್ಞಾ ವಿಧಿಯನ್ನು ಪೊಲೀಸ್ ವೃತ್ತ ನಿರೀಕ್ಷರಾದ ನರಸಿಂಹಮೂರ್ತಿ ರವರು ಭೋಧಿಸಿದರು. ಬಾಲಕಾರ್ಮಿಕ ಪದ್ದತಿ ಕುರಿತು ಏರ್ಪಡಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ಬಹುಮಾನ ಪಡೆದ ಶಾಲಾ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು ಹಾಗೂ ಬಿ.ಟಿ.ಮುನಿನಿಂಗೇಗೌಡ ಇವರಿಗೆ ರಾಮನಗರ ಜಿಲ್ಲೆಯ ಅತ್ಯುತ್ತಮ ಕಾರ್ಮಿಕ ನಿರೀಕ್ಷಕ ಎಂದು ಸನ್ಮಾನಿಸಲಾಯಿತು.

ಸಭೆಯಲ್ಲಿ ಮುಖ್ಯ ಯೋಜನಾ ನಿರ್ದೇಶಕ ಚಿಕ್ಕಸುಬ್ಬಯ್ಯ, ಪೊಲೀಸ್ ವೃತ್ತ ನಿರೀಕ್ಷರಾದ ನರಸಿಂಹಮೂರ್ತಿ, ಕಾರ್ಮಿಕ ಅಧಿಕಾರಿ ಸುಭಾಷ್ ಎಂ ಆಲದಕಟ್ಟಿ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಯೋಜನಾ ನಿರ್ದೇಶಕ ದಿನೇಶ್ ಹಾಗೂ ಡಾನ್ ಬಾಸ್ಕೋ ಸಂಸ್ಥೆಯ ಪಾಧರ್ ಜಾರ್ಜ್ ಹಾಗೂ ವಿವಿಧ ಕಾರ್ಮಿಕ ಮತ್ತು ಸಂಘಟನೆಯ ಮುಖಂಡರು ಭಾಗವಹಿಸಿದ್ದರು.

RELATED ARTICLES
- Advertisment -
Google search engine

Most Popular