Friday, April 18, 2025
Google search engine

Homeಅಪರಾಧಕಾನೂನುವಿಶೇಷ ಸ್ಥಾನಮಾನ ರದ್ದು: ಕೇಂದ್ರ ಸರ್ಕಾರದ ನಿರ್ಧಾರ ಎತ್ತಿ ಹಿಡಿದ ಸುಪ್ರೀಂಕೋರ್ಟ್-  ಸೆ. 30 ರೊಳಗೆ...

ವಿಶೇಷ ಸ್ಥಾನಮಾನ ರದ್ದು: ಕೇಂದ್ರ ಸರ್ಕಾರದ ನಿರ್ಧಾರ ಎತ್ತಿ ಹಿಡಿದ ಸುಪ್ರೀಂಕೋರ್ಟ್-  ಸೆ. 30 ರೊಳಗೆ ಚುನಾವಣೆ ನಡೆಸಲು ಸೂಚನೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಿಂದ ಸಂವಿಧಾನದ 370 ನೇ ವಿಧಿಯ ನಿಬಂಧನೆಗಳನ್ನು ರದ್ದುಗೊಳಿಸುವ ಕೇಂದ್ರ ಸರ್ಕಾರದ 2019 ರ ನಿರ್ಧಾರದ ವಿರುದ್ಧ ಸಲ್ಲಿಸಲಾದ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ಇಂದು ತೀರ್ಪು ನೀಡಿದ್ದು, ಕೇಂದ್ರ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಎತ್ತಿಹಿಡಿದಿದೆ.

‘ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸಲು ರಾಷ್ಟ್ರಪತಿಯವರು ಸಾಂವಿಧಾನಿಕ ಆದೇಶ ಹೊರಡಿಸುವ ಅಧಿಕಾರ ಹೊಂದಿದ್ದಾರೆ’ ಎಂದು ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ. ಚಂದ್ರಚೂಡ್ ನೇತೃತ್ವದ ಪೀಠ ಹೇಳಿದೆ.

‘ಜಮ್ಮು ಮತ್ತು ಕಾಶ್ಮೀರದ ರಾಜ್ಯ ಸ್ಥಾನಮಾನವನ್ನು ಶೀಘ್ರವೇ ಮರುಸ್ಥಾಪಿಸುವಂತೆ ಕೇಂದ್ರಕ್ಕೆ ನಿರ್ದೇಶನ ನೀಡಲಾಗುವುದು. ಹಾಗೆಯೇ, ಅಲ್ಲಿನ ವಿಧಾನಸಭೆಗೆ 2024ರ ಸೆಪ್ಟೆಂಬರ್‌ 30ರ ಒಳಗೆ ಚುನಾವಣೆ ನಡೆಸಲು ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ಸೂಚಿಸಲಾಗುವುದು’ ಎಂದು ತೀರ್ಪು ಪ್ರಕಟಿಸುವ ವೇಳೆ ಸಿಜೆಐ ಹೇಳಿದ್ದಾರೆ.

ಸಂವಿಧಾನದ 370ನೇ ವಿಧಿ ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ಕಲ್ಪಿಸಿದ್ದ ವಿಶೇಷ ಸ್ಥಾನಮಾನವನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು, 2019ರ ಆಗಸ್ಟ್‌ 5ರಂದು ರದ್ದುಪಡಿಸಿದೆ. ಹಾಗೆಯೇ, ರಾಜ್ಯವನ್ನು ‘ಜಮ್ಮು ಮತ್ತು ಕಾಶ್ಮೀರ’ ಹಾಗೂ ‘ಲಡಾಖ್‌’ ಎಂದು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿದೆ.

RELATED ARTICLES
- Advertisment -
Google search engine

Most Popular