ವರದಿ: ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ರಾಜ್ಯಪಾಲರು ಪ್ರಾಸಿಕ್ಯೂಕ್ಷನ್ ಗೆ ಅನುಮತಿ ಕೊಡುವ ಮೂಲಕ ಅಧಿಕಾರ ದುರ್ಬಳಕೆ ಮಾಡಿ ಕೊಂಡಿದ್ದಾರೆ ಎಂದು ರಾಜ್ಯ ಕೆಪಿಸಿಸಿ ಹಿಂದುಳಿದ ವರ್ಗದ ಪ್ರಧಾನ ಕಾರ್ಯದರ್ಶಿ ಕಂಚಿನಕೆರೆ ಕೆ.ಪಿ.ಯೋಗೇಶ್ ಹೇಳಿದರು.
ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ನಾಯಕರು ಕೇಂದ್ರ ನಾಯಕರ ಮೇಲೆ ಒತ್ತಡ ಹೇರಿ ರಾಜ್ಯಪಾಲರ ಹುದ್ದೆಯನ್ನು ದುರ್ಬಳಕೆ ಮಾಡಿಕೊಳ್ಳಿವ ಮೂಲಕ ಪ್ರಾಮಾಣಿಕತೆ ಯಿಂದ ಕೆಲಸ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಗೆ ಮಸಿ ಬಳಿಯುವ ಕೆಲಸ ಮಾಡಲಾಗುತ್ತಿದೆ ಎಂದಿದ್ದಾರೆ.
ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಹುನ್ನಾರವನ್ನು ಜನತೆ ಅರಿತು ಕೊಳ್ಳಬೇಕು ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯ ಸರ್ಕಾರ ಅಸ್ತಿರ ಗೊಳ್ಳಿಸಲಿಕೆ ಬಿಜೆಪಿ ಹಾಗೂ ಜೆಡಿಎಸ್ ಮುಂದಾಗಿದ್ದು ಇದರ ವಿರುದ್ದ ರಾಜ್ಯಾದ್ಯಂತ ಕಾಂಗ್ರೇಸ್ ಹಿಂದೂಳಿದ ವಿಭಾಗದಿಂದ ಬಿಜೆಪಿ ಹಾಗೂ ಜೆಡಿಎಸ್ ಕೇಂದ್ರ ಹಾಗೂ ರಾಜ್ಯ ನಾಯಕರ ವಿರುದ್ಧ ನಮ್ಮ ಪ್ರತಿಭಟನೆ ಪ್ರಾರಂಭ ಆಗುತ್ತೆ ಎಂದು ತಿಳಿಸಿದರು.