ಹಾಸನ, ಜುಲೈ 21: ಟಿಪ್ಪರ್ ವಾಹನ ಡಿಕ್ಕಿ ಯಾಗಿ ಇನೋವಾ ಕಾರಿನಲ್ಲಿದ್ದ ಮೂವರ ಸ್ಥಿತಿ ಗಂಭೀರವಾಗಿದ್ದು, ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ದಾರುಣ ಘಟನೆ ಜಿಲ್ಲೆಯ ಆಲೂರು ತಾಲೂಕಿನ ಈಶ್ವರಹಳ್ಳಿ ಕೂಡಿಗೆ ಬಳಿ ನಡೆದಿದೆ. ಇನೋವಾ ಕಾರಿನಲ್ಲಿ ಮಂಗಳೂರು ಕಡೆಗೆ ತೆರಳುತ್ತಿದ್ದಾಗ ಈ ವೇಳೆ ಹಾಸನ ಕಡೆಯಿಂದ ಆಗಮಿಸುತ್ತಿದ್ದ ಟಿಪ್ಪರ್ ವಾಹನ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಸದ್ಯ ಮೃತಪಟ್ಟವರ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದು, ಆಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.