ದಕ್ಷಿಣ (ಕನ್ನಡ ಜಿಲ್ಲೆ): ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಾವು ಸಮೀಪ ಕೆಎಸ್ಸಾರ್ಟಿಸಿ ಬಸ್ ಹಾಗೂ ಬುಲೆಟ್ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಕಾಸರಗೋಡು ಜಿಲ್ಲೆಯ ವರ್ಕಾಡಿ ಗ್ರಾಮದ ಪಾತೂರು ಸಮೀಪದ ಬದಿಮೂಲೆ ನಿವಾಸಿ ಅಶ್ರಫ್ ಎಂದು ಗುರುತಿಸಲಾಗಿದೆ.
ಘಟನಾ ಸ್ಥಳಕ್ಕೆ ಸಂಪ್ಯ ಪೊಲೀಸರು, ಪುತ್ತೂರು ಗ್ರಾಮಾಂತರ ಪೊಲೀಸರು ತೆರಳಿ, ಪರಿಶೀಲನೆ ನಡೆಸಿದ್ದಾರೆ.