ತುಮಕೂರು: ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಬೆಂಗಳೂರು ನಗರದ ದೊಮ್ಮನಹಳ್ಳಿಯ ನಿವಾಸಿ ಹರೀಶ್ (21) ಮೃತ ದುರ್ದೈವಿ.

ತುಮಕೂರು ಜಿಲ್ಲೆ ಸಿರಾ ತಾಲೂಕಿನ ಸೀಬಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಅಪಘಾತ ಸಂಭವಿಸಿದ್ದು, ಅಪಘಾತವಾದ ರಭಸಕ್ಕೆ ಬೈಕ್ ಸವಾರನ ದೇಹ ಛಿದ್ರ-ಛಿದ್ರವಾಗಿದೆ.
ಇತ್ತೀಚೆಗೆ ನಾಲ್ಕು ಲಕ್ಷ ರೂಪಾಯಿ ಮೌಲ್ಯದ ಬೈಕ್ ನ ಖರೀದಿ ಮಾಡಿದ್ದ ಹರೀಶ್, ಚಿತ್ರದುರ್ಗದ ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನಕ್ಕೆ ಹೋಗಿ ಬರುವಾಗ ಅಪಘಾತ ಸಂಭವಿಸಿದೆ.
ಕಳ್ಳಂಬೆಳ್ಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.