Friday, April 11, 2025
Google search engine

Homeರಾಜ್ಯಲಾರಿ-ಕೆಎಸ್ ಆರ್ ಟಿಸಿ ಬಸ್ ನಡುವೆ ಅಪಘಾತ: 5 ಮಂದಿ ಸಾವು

ಲಾರಿ-ಕೆಎಸ್ ಆರ್ ಟಿಸಿ ಬಸ್ ನಡುವೆ ಅಪಘಾತ: 5 ಮಂದಿ ಸಾವು

ಚಿತ್ರದುರ್ಗ: ಕೆಎಸ್ ​ಆರ್ ​ಟಿಸಿ ಬಸ್ ಮತ್ತು ಲಾರಿ ಮಧ್ಯೆ ಡಿಕ್ಕಿ ಸಂಭವಿಸಿದ ಪರಿಣಾಮ 5 ಜನ ಮೃತಪಟ್ಟ ಘಟನೆ ಹಿರಿಯೂರು ತಾಲೂಕಿನ ಗೊಲ್ಲಹಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 450(ಎ)ರಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ.

ಮೃತರನ್ನು ಬೆಂಗಳೂರು ಮೂಲದ ಪಾರ್ವತಮ್ಮ45), ರಾಯಚೂರು ರಾಯಚೂರು ಜಿಲ್ಲೆ ಮಸ್ಕಿ ಮೂಲದ ರಮೇಶ್(40), ರಾಯಚೂರಿನ ಆಲಾಪುರದ ರವಿ (23), ರಾಯಚೂರಿನ ಮಾಬಮ್ಮ(35), ಮಾನ್ವಿ ಮೂಲದ ಬಾಲಕ ನರಸಣ್ಣ(5) ಎಂದು ಗುರುತಿಸಲಾಗಿದೆ.

ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿದ್ದ 9 ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಯಚೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ ಆರ್‌ ಟಿಸಿ ಬಸ್ಸಿಗೆ ಹಿರಿಯೂರಿನ ಗೊಲ್ಲಹಳ್ಳಿ ಬಳಿ ಲಾರಿ ಡಿಕ್ಕಿಯಾಗಿದೆ. ಅಪಘಾತದ ನಂತರ ಲಾರಿ ಚಾಲಕ ಲಾರಿ ಸಮೇತ ಪರಾರಿಯಾಗಿದ್ದಾನೆ. ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಒಟ್ಟು 51 ಜನ ಪ್ರಯಾಣಿಸುತ್ತಿದ್ದರು. ಅಪಘಾತದ ವೇಳೆ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದರೆ, ಇನ್ನಿಬ್ಬರು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಹಾಗೂ ಮತ್ತೊಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಐಮಂಗಲ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಸ್ಸಿನಲ್ಲಿದ್ದ ಇತರೆ ಗಾಯಾಳುಗಳನ್ನು ಐಮಂಗಲ, ಹಿರಿಯೂರು ಹಾಗೂ ಚಳ್ಳಕೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.

RELATED ARTICLES
- Advertisment -
Google search engine

Most Popular