Friday, April 11, 2025
Google search engine

Homeಅಪರಾಧಆಕಸ್ಮಿಕ ಬೆಂಕಿ ಅವಘಡ;10 ಕೋಟಿ ರೂ. ಮೌಲ್ಯದ ಮತ್ಸ್ಯ ಉತ್ಪನ್ನಗಳು ಬೆಂಕಿಗಾಹುತಿ

ಆಕಸ್ಮಿಕ ಬೆಂಕಿ ಅವಘಡ;10 ಕೋಟಿ ರೂ. ಮೌಲ್ಯದ ಮತ್ಸ್ಯ ಉತ್ಪನ್ನಗಳು ಬೆಂಕಿಗಾಹುತಿ

ಮಂಗಳೂರು (ದಕ್ಷಿಣ ಕನ್ನಡ); ಅಥೆಂಟಿಕ್ ಓಷನ್ ಟ್ರೆಷರ್ ನಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ ಘಟನೆ
ಮಂಗಳೂರಿನ ಕೈಗಾರಿಕಾ ವಲಯದಲ್ಲಿ ನಡೆದಿದೆ. ಕಂಪೆನಿಯ ಕೋಲ್ಡ್ ಸ್ಟೋರ್ ಸೆಕ್ಷನ್ ಮತ್ತು ಕಟ್ಟಿಂಗ್ ಸೆಕ್ಷನ್ ಗಳಲ್ಲಿ ದುರಸ್ತಿ ಕಾರ್ಯನಡೆಯುತ್ತಿತ್ತು. ಈ ವೇಳೆ ಕೋಲ್ಡ್ ಸ್ಟೋರೆಜ್ ಸೆಕ್ಷನ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಅವಘಡ ಸಂಭವಿಸಿದೆ ಕಂಪೆನಿಯಲ್ಲಿ ದುರಸ್ತಿ ಕಾರ್ಯ ನಡೆಯುತ್ತಿರುವ ಕಾರಣ ನೌಕರರು ಯಾರೂ ಇರಲಿಲ್ಲ. ಹಾಗಾಗಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

ಈ ಘಟನೆಯಿಂದ ಸುಮಾರು 10 ಕೋಟಿ ರೂ. ಮೌಲ್ಯದ ಮತ್ಸ್ಯ ಉತ್ಪನ್ನಗಳು ಬೆಂಕಿಗಾಹುತಿಯಾಗಿವೆ. ಕೈಗಾರಿಕಾ ವಲಯ ಎಂಆರ್ ಪಿಎಲ್, ಗೇಲ್ ಇಂಡಿಯಾ ಕಂಪೆನಿಗಳ ಅಗ್ನಿ ಶಾಮಕ ವಾಹನಗಳು ಸ್ಥಳಕ್ಕೆ ತೆರಳಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದವು. ಅಥೆಂಟಿಕ್ ಓಷನ್ ಟ್ರೆಷರ್ ಕಂಪೆನಿಯು ಮೀನುಗಳನ್ನು ಸ್ವಚ್ಛಗೊಳಿಸಿ ಮಾಂಸದ ರೂಪಕ್ಕೆ ತಂದು ಅದನ್ನು 10 ಕೆ.ಜಿ. ಯ ಪ್ಯಾಕೆಟ್ ಗಳನ್ನಾಗಿ ಮಾಡಿ ವಿದೇಶಗಳಿಗೆ ರಫ್ತು ಮಾಡುವ ಕಂಪೆನಿಯಾಗಿದೆ.

RELATED ARTICLES
- Advertisment -
Google search engine

Most Popular