ತುಮಕೂರು: ಮನೆಗೆ ಆಕಸ್ಮಿಕ ಬೆಂಕಿ, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ತುಮಕೂರು ಜಿಲ್ಲೆ ತುರುವೇಕೆರೆ ಪಟ್ಟಣದಲ್ಲಿ ನಡೆದಿದೆ.
ಯಶೋಧ ಎಂಬುವವರ ಮನೆಯಲ್ಲಿ ಶಾಹೀದ್ ಅಕ್ಬರ್ ಕುಟುಂಬ ವಾಸವಿತ್ತು. ಬೆಂಕಿ ಬಿದ್ದ ಸಂದರ್ಭದಲ್ಲಿ ತುಂಬು ಗರ್ಭಿಣಿ ಹಾಗೂ ಐದು ವರ್ಷದ ಮಗು ಕೂಡ ಇತ್ತು. ಆಕಸ್ಮಿಕ ಬೆಂಕಿ ಬಿದ್ದ ಕೂಡಲೇ ಮನೆಯ ಒಳಗಿದ್ದವರು ಹೊರಗೆ ಓಡಿ ಬಂದಿದ್ದಾರೆ. ಅದೃಷ್ಟ ವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.
30 ಸಾವಿರ ನಗದು, ಟಿ.ವಿ ಸೇರಿ ಎರಡು ಲಕ್ಷ ರೂ ಮೌಲ್ಯದ ವಸ್ತುಗಳು ಬೆಂಕಿಯಲ್ಲಿ ಭಸ್ಮವಾಗಿದೆ.
ವಿಷಯ ತಿಳಿದು ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ, ಬೆಂಕಿಯನ್ನು ನಂದಿಸಿದ್ದಾರೆ.
ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.