ಮಂಡ್ಯ: ಕೃಷಿ ಸಚಿವರ ವಿರುದ್ಧ ಕೃಷಿ ಅಧಿಕಾರಿಗಳ ಹೆಸರಿನಲ್ಲಿ ರಾಜ್ಯಪಾಲರಿಗೆ ನಕಲಿ ದೂರು ನೀಡಿದ್ದಾರೆ ಎಂದು ಆರೋಪಿಸಿ, ಸಚಿವರ ಮೇಲಿನ ಷಡ್ಯಂತ್ರ ಖಂಡಿಸಿ ನಗರದ ಸಂಜಯ ವೃತ್ತದಲ್ಲಿ ಮಂಡ್ಯ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಜೆಡಿಎಸ್ ಹಾಗೂ ಹೆಚ್ ಡಿಕೆ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್ ಕಾರ್ಯಕರ್ತರು, ಜೆಡಿಎಸ್ ದ್ವೇಷದ ರಾಜಕಾರಣ ಮಾಡ್ತಿದೆ ಎಂದು ಘೋಷಣೆ ಕೂಗಿದರು.
ರಾಜ್ಯಪಾಲರಿಗೆ ಕೃಷಿ ಅಧಿಕಾರಿಗಳ ಹೆಸರಲ್ಲಿ ನಕಲಿ ದೂರು ನೀಡಲಾಗಿದೆ ಎಂದು ಕಿಡಿ ಕಾರಿದರು.
ಕೃಷಿ ಅಧಿಕಾರಿಗಳ ಸಹಿಯನ್ನು ನಕಲಿ ಮಾಡಿದ್ದಾರೆ. ನಕಲಿ ದೂರು ಪತ್ರ ಸಲ್ಲಿಸಿದವರನ್ನು ಪತ್ತೆ ಹೆಚ್ಚುವಂತೆ ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿದ್ದರು.