ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪಕ್ರರಣ ಇದೀಗ ರಾಜ್ಯ ಅಲ್ಲದೆ ದೇಶಾದ್ಯಂತ ಸದ್ದು ಮಾಡುತ್ತಿದೆ. ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು ಏನು ಹೇಳಿದ್ದಾರೆ ಎಂದು ಇಲ್ಲಿ ತಿಳಿಯರಿ.
ಎಚ್.ಡಿ.ರೇವಣ್ಣ ಹಾಗೂ ಮಗ ಪ್ರಜ್ವಲ್ ರೇವಣ್ಣ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿದ ರೇವಣ್ಣ, ಇದಕ್ಕೆಲ್ಲ ಹೆದರಿ ನಾನು ಹೆದರಿ ಎಲ್ಲಿ ಓಡಿ ಹೋಗುವುದಿಲ್ಲ. ನನ್ನ ಹಾಗೂ ಕಟುಂಬದ ವಿರುದ್ಧ ಷಡ್ಯಂತ್ರ ನಡೆದಿದೆ. ನಾನು ಕಾನೂನು ಹೋರಾಟ ಮಾಡುತ್ತೇನೆ ಎಂದಿದ್ದಾರೆ. ಇನ್ನು ಪ್ರಜ್ವಲ್ ರೇವಣ್ಣ ವಿದೇಶ ಪ್ರಯಾಣದ ಬಗ್ಗೆ ಮಾತನಾಡಿ, ಎಫ್‌ಐಆರ್ ಹಾಕುತ್ತಾರೆ ಅನ್ನೋದು ಅವನಿಗೆ ಗೊತ್ತಿರಲಿಲ್ಲ. ಪ್ರಜ್ವಲ್ ರೇವಣ್ಣ ಅವರ ವಿದೇಶ ಪ್ರಯಾಣ ಎಫ್‌ಐಆರ್ ಆಗುವ ಮೊದಲೇ ನಿರ್ಧಾರವಾಗಿತ್ತು ಎಂದರು.
ಪ್ರಜ್ವಲ್ ರೇವಣ್ಣ ಪ್ರಕರಣದ ಕುರಿತು ನಾನು ಏನು ಹೇಳುವುದಿಲ್ಲ. ಎಸ್‌ಐಟಿಯಿಂದ ತನಿಖೆ ಆಗಲಿ ಎಂದು ಎಚ್.ಡಿ.ದೇವೆಗೌಡ ಅವರ ಭೇಟಿ ಬಳಿಕ ಮಾಜಿ ಸಚಿವ ಎಚ್.ಡಿ.ರೇವಣ್ಣ ಹೇಳಿದರು.