Friday, April 11, 2025
Google search engine

Homeಅಪರಾಧಬಿಎಸ್‌ಪಿ ತಮಿಳುನಾಡು ಮುಖ್ಯಸ್ಥ ಹತ್ಯೆಯ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ

ಬಿಎಸ್‌ಪಿ ತಮಿಳುನಾಡು ಮುಖ್ಯಸ್ಥ ಹತ್ಯೆಯ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ

ಚೆನ್ನೈ: ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ತಮಿಳುನಾಡು ಮುಖ್ಯಸ್ಥ ಕೆ ಆರ್ಮ್‌ಸ್ಟ್ರಾಂಗ್ ಹತ್ಯೆಯ ಆರೋಪಿಗಳಲ್ಲಿ ಒಬ್ಬನನ್ನು ಎನ್‌ಕೌಂಟರ್‌ನಲ್ಲಿ ಕೊಲ್ಲಲಾಗಿದೆ.

ತಮಿಳುನಾಡಿನ ಬಿಎಸ್‌ಪಿ ಮುಖ್ಯಸ್ಥರನ್ನು ಜುಲೈ ೫ ರಂದು ಆರು ಅಪರಿಚಿತ ವ್ಯಕ್ತಿಗಳು ಹತ್ಯೆ ಮಾಡಿದ್ದರು. ಬಿಎಸ್‌ಪಿ ರಾಜ್ಯ ಮುಖ್ಯಸ್ಥರ ಹತ್ಯೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ತಿರುವೆಂಗಡಂ ಅವರನ್ನು ಚೆನ್ನೈನ ಮಾಧವರಂ ಬಳಿ ಪೊಲೀಸ್ ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಿರುವೆಂಗಡಂ ಕೊಲೆಗೂ ಮುನ್ನ, ಬಿಎಸ್‌ಪಿ ನಾಯಕನ ಚಟುವಟಿಕೆಗಳ ಮೇಲೆ ನಿರಂತರ ನಿಗಾ ಇರಿಸಿಕೊಂಡು ಹಲವು ದಿನಗಳ ಕಾಲ ಆರ್ಮ್‌ಸ್ಟ್ರಾಂಗ್‌ನನ್ನು ಹಿಂಬಾಲಿಸುತ್ತಿದ್ದ ಎನ್ನಲಾಗಿದೆ.

ಕೆ ಆರ್ಮ್‌ಸ್ಟ್ರಾಂಗ್ ಅವರನ್ನು ಜುಲೈ ೫ ರಂದು ಚೆನ್ನೈನ ಪೆರಂಬೂರ್ ಪ್ರದೇಶದಲ್ಲಿನ ಅವರ ನಿವಾಸದ ಬಳಿ ಆರು ಅಪರಿಚಿತ ವ್ಯಕ್ತಿಗಳು ಕೊಂದು ಹಾಕಿದ್ದರು. ಬೈಕ್‌ನಲ್ಲಿ ಬಂದ ವ್ಯಕ್ತಿಗಳ ಗುಂಪು ಆರ್ಮ್‌ಸ್ಟ್ರಾಂಗ್ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿತ್ತು. ರಸ್ತೆಯಲ್ಲಿ ಮಾರಣಾಂತಿಕವಾಗಿ ಗಾಯಗೊಂಡು ಬಿದ್ದಿದ್ದ ಬಿಎಸ್ಪಿ ಮುಖ್ಯಸ್ಥರನ್ನು ನಗರದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು.

RELATED ARTICLES
- Advertisment -
Google search engine

Most Popular