Sunday, April 20, 2025
Google search engine

Homeಅಪರಾಧಕಾನೂನುಗಣೇಶ ವಿಸರ್ಜನೆ ವೇಳೆ ಪ್ರಚೋದನಾಕಾರಿ ಹೇಳಿಕೆ ಆರೋಪ : ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶ ವಿಸರ್ಜನೆ ವೇಳೆ ಪ್ರಚೋದನಾಕಾರಿ ಹೇಳಿಕೆ ಆರೋಪ : ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಯಾದಗಿರಿ : ಇತ್ತೀಚಿಗೆ ಯಾದಗಿರಿಯಲ್ಲಿ ನಡೆದಂತಹ ಗಣೇಶ ವಿಸರ್ಜನೆಯ ಶೋಭಾಯಾತ್ರೆಯ ವೇಳೆ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಇದೀಗ ಪ್ರತಾಪ್ ಸಿಂಹ ಸೇರಿದಂತೆ ಐವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಗಣೇಶ ವಿಸರ್ಜನೆ ವೇಳೆ ಎಲ್ಲಾ ಕಡೆ ಕಲ್ಲು ತೂರುವ ಪ್ರವೃತ್ತಿ ಕಾಣಸ್ತಾ ಇದೆ. ಕಲ್ಲು ಹೊಡೆಯುವ ಪ್ರವೃತ್ತಿ ಮುಸ್ಲಿಮರಿಗೆ ಯಾಕೆ ಬರುತ್ತೆ? ಹಿಂದೂಗಳು ಕೈಯಲ್ಲಿ ಕಲ್ಲು ಹೀಡಿದುಕೊಂಡರೆ ನಿಮ್ಮ ಕಥೆ ಏನು ಆಗುತ್ತೆ? ನ್ಯೂಕ್ಲಿಯರ್ ಬಾಂಬ್ ಮಾಡಿದ ಹಿಂದೂಗಳಿಗೆ ಪೆಟ್ರೋಲ್ ಬಾಂಬ್ ಮಾಡೋಕೆ ಬರಲ್ವಾ..ಟಾಂಗಾಗಳು, ಗುಜರಿಗಳು ಮಾಡುವ ಕೆಲಸವನ್ನು ಕ್ಷಣ ಮಾತ್ರದಲ್ಲಿ ಹಿಂದೂಗಳಿಗೆ ಮಾಡಲು ಬರುತ್ತದೆ ಎಂದು ಪ್ರತಾಪ್ ಸಿಂಹ ಮಾತನಾಡಿದ್ದರು ಎನ್ನಲಾಗಿದೆ.

ನಾಗಮಂಗಲ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಾಪ್ ಸಿಂಹ ಅವರು ಈ ಒಂದು ಹೇಳಿಕೆ ನೀಡಿದ್ದರು. ಹಾಗಾಗಿ ಧಾರ್ಮಿಕ ನಂಬಿಕೆಗಳಿಗೆ ಅವಮಾನಗೊಳಿಸಿ ದ್ವೇಷ ಭಾವನೆಯಿಂದ ಮಾತನಾಡಿದ್ದಾರೆ ಎಂದು ಆರೋಪಿಸಿ ಶಹಾಪುರ ಠಾಣೆಯಲ್ಲಿ ಕೇಸ್ ದಾಖಲು ಮಾಡಲಾಗಿದೆ. ಶಹಾಪುರ ಪಿಎಸ್‌ಐ ಡಿ.ವಿ.ನಾಯಕ ಅವರಿಂದ ಸ್ವಕೃತ ದೂರು ದಾಖಲಾಗಿದ್ದು, ಬಿಎನ್‌ಎಸ್ ಕಾಯ್ದೆಯಡಿ ೨೯೯, ೧೯೨ ಕಾಯ್ದೆಯಡಿ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿ ೫ ಜನರ ವಿರುದ್ಧ ಕೇಸ್ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

RELATED ARTICLES
- Advertisment -
Google search engine

Most Popular