‘ಆಚಾರ್ ಆ್ಯಂಡ್ ಕೋ’ ಸಿನಿಮಾ ಕಳೆದ ವಾರ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಈ ಚಿತ್ರ ವೀಕೆಂಡ್ನಲ್ಲಿ ಹೌಸ್ಫುಲ್ ಪ್ರದರ್ಶನ ಕಂಡಿದೆ. ಈ ಸಿನಿಮಾ ವಿದೇಶದಲ್ಲೂ ರಿಲೀಸ್ ಆಗುತ್ತಿದೆ.
ಸಿಂಧೂ ಶ್ರೀನಿವಾಸಮೂರ್ತಿ ನಿರ್ದೇಶನದ, ಪಿಆರ್ಕೆ ಪ್ರೊಡಕ್ಷನ್ಸ್ ನಿರ್ಮಾಣದ ‘ಆಚಾರ್ ಆ್ಯಂಡ್ ಕೋ’ ಸಿನಿಮಾ ಕಳೆದ ವಾರ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಈ ಸಿನಿಮಾ ಎಲ್ಲ ಕಡೆಗಳಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಈ ಚಿತ್ರ ವೀಕೆಂಡ್ನಲ್ಲಿ ಹೌಸ್ಫುಲ್ ಪ್ರದರ್ಶನ ಕಂಡಿದೆ. ಈ ಸಿನಿಮಾ ವಿದೇಶದಲ್ಲೂ ರಿಲೀಸ್ ಆಗುತ್ತಿದೆ. ಈ ಬಗ್ಗೆ ಚಿತ್ರತಂಡ ಸಕ್ಸಸ್ ಮೀಟ್ನಲ್ಲಿ ಮಾಹಿತಿ ನೀಡಿದೆ. ಆಗಸ್ಟ್ 15ರ ವೇಳೆಗೆ, ಅಮೆರಿಕ, ಆಸ್ಟ್ರೇಲಿಯಾ ಮೊದಲಾದ ದೇಶಗಳಲ್ಲಿ ಈ ಚಿತ್ರ ಪ್ರದರ್ಶನ ಕಾಣಲಿದೆ