Saturday, April 19, 2025
Google search engine

Homeಸ್ಥಳೀಯಪ್ರಾಮಾಣಿಕತೆ, ಪಾರದರ್ಶಕತೆಯಿಂದ ಕಾರ್ಯ ನಿರ್ವಹಿಸಿ

ಪ್ರಾಮಾಣಿಕತೆ, ಪಾರದರ್ಶಕತೆಯಿಂದ ಕಾರ್ಯ ನಿರ್ವಹಿಸಿ

ಮೈಸೂರು: ಸೌಹಾರ್ದ ಸಹಕಾರಿ ಕ್ಷೇತ್ರದ ಗುಣಮಟ್ಟ ನಿರ್ವಹಣೆಗೆ ಆದ್ಯತೆ ನೀಡುವ ಮೂಲಕ ಸಂಯುಕ್ತ ಸಹಕಾರಿಯ ಬೆಳವಣಿಗೆ ಆಸಕ್ತಿವಹಿಸಿ ಕೆಲಸ ನಿರ್ವಹಿಸಬೇಕು ಎಂದು ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಅಧ್ಯಕ್ಷ ಜಿ.ನಂಜನಗೌಡ ಹೇಳಿದರು.
ನಗರದ ಗ್ರೀನ್ ಹೆರಿಟೇಜ್ ಹೋಟೆಲ್‌ನಲ್ಲಿ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತದ ಮೈಸೂರು, ಮಂಡ್ಯ, ಕೊಡಗು, ಚಾಮರಾಜನಗರ ಜಿಲ್ಲಾ ಸೌಹಾರ್ದ ಸಹಕಾರಿಗಳ ಸಂಪರ್ಕ ಸಭೆ ಹಾಗೂ ವಿಷಯಾಧಾರಿತ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಹಕಾರಿ ಸಂಸ್ಥೆಗಳು ಹೆಚ್ಚಿನ ಸಂಖ್ಯೆಯಲ್ಲಿ ಬೆಳೆಯುತ್ತಿದ್ದು, ಸಹಕಾರ ಸಂಘಗಳ ಸಂಖ್ಯೆಗಿಂತ ಗುಣಮಟ್ಟದ ಕಡೆಗೆ ಗಮನಹರಿಸಲು ಸಂಯುಕ್ತ ಸಹಕಾರಿ ಆದ್ಯತೆ ನೀಡುತ್ತಿದೆ. ಸಹಕಾರಿಗಳು ತಮ್ಮ ಸಹಕಾರ ಸಂಸ್ಥೆಯನ್ನು ಪ್ರಾಮಾಣಿಕತೆ ಹಾಗೂ ಪಾರದರ್ಶಕತೆಯಿಂದ ಕಾರ್ಯ ನಿರ್ವಹಿಸಿ ಮುನ್ನಡೆಸಬೇಕು ಎಂದು ಮನವಿ ಮಾಡಿದರು.
ಈ ಭಾಗದ ಜಿಲ್ಲೆಗಳಲ್ಲಿ ಸಹಕಾರ ಕ್ಷೇತ್ರದ ಬೆಳವಣಿಗೆಗೆ ಪೂರಕವಾದ ವಾತವಾರಣವಿದೆ. ಜನಸಾಮಾನ್ಯರ ಆರ್ಥಿಕ ಅಭಿವೃದ್ಧಿಗೆ ಸಹಕಾರ ಚಳುವಳಿ ಪೂರಕವಾಗಿ ಕಾರ್ಯನಿರ್ವಹಿಸಬೇಕು. ರಾಜಕೀಯದಲ್ಲಿ ಇರುವಂತೆ ನಮ್ಮ ಸಹಕಾರ ರಂಗದಲ್ಲಿಯೂ ಸ್ವಾರ್ಥಿಗಳು ಹೆಚ್ಚಿದ್ದು, ಹಣ ದುರುಪಯೋಗ ಬಳಕೆ ಮಾಡುತ್ತಿದ್ದಾರೆ ಎಂದ ಅವರು, ಹೂಡಿಕೆಯೊಂದಿಗೆ ಷೇರು ಬಂಡವಾಳ ಹೆಚ್ಚಿಸಿಕೊಳ್ಳಬೇಕು ಎಂದು ತಿಳಿಸಿದರು.
೨೨ ವರ್ಷಗಳಲ್ಲಿ ಇಷ್ಟೊಂದು ದೊಟ್ಟಮಟ್ಟದಲ್ಲಿ ಸಹಕಾರಿ ಸಂಸ್ಥೆ ಹುಟ್ಟುಹಾಕುವುದು ಸಾಮಾನ್ಯ ವಿಷಯವಲ್ಲ. ರಾಜ್ಯದಲ್ಲಿ ೬೦೦೦ಕ್ಕೂ ಹೆಚ್ಚು ಸೌಹಾರ್ದ ಸಹಕಾರಿಗಳು ಕಾರ್ಯನಿರ್ವಹಿಸುತ್ತಿವೆ. ರಾಜ್ಯದ ಸೌಹಾರ್ದ ಸಹಕಾರಿಗಳಲ್ಲಿ ಅತಿ ಹೆಚ್ಚು ಇ ಸ್ಟ್ಯಾಂಪಿಂಗ್ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ರಾಜ್ಯದ ಬೊಕ್ಕಸಕ್ಕೆ ಹೆಚ್ಚು ರಾಜಸ್ವವನ್ನು ನೀಡುತ್ತಿವೆ. ಸಹಕಾರಿ ಕ್ಷೇತ್ರದಲ್ಲಿ ೫೦ ಲಕ್ಷಕ್ಕೂ ಹೆಚ್ಚು ಸದಸ್ಯರು ತೊಡಗಿಸಿಕೊಂಡಿದ್ದಾರೆ ಎಂದು ತಿಳಿಸಿದರು.
ವ್ಯವಸ್ಥಾಪಕ ನಿರ್ದೇಶಕ ಶರಣಗೌಡ ಜಿ.ಪಾಟೀಲ ಮಾತನಾಡಿ, ಸೌಹಾರ್ದ ಸಂಸ್ಥೆಗಳು ಹೆಚ್ಚು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ. ಇದರೊಂದಿಗೆ ಗ್ರಾಹಕರ ಮನೋಸ್ಥೈರ್ಯ ಹೆಚ್ಚಿಸುವ ಕೆಲಸ ಮಾಡಬೇಕು. ಆಗಸ್ಟ್ ೨೯ರಂದು ಸಹಕಾರಿ ಸಾಮಾನ್ಯ ಸಭೆ ಇದ್ದು, ಎಲ್ಲರೂ ಕ್ರಿಯಾಶೀಲರಾಗಿ ಪಾಲ್ಗೊಂಡು, ಸಲಹೆ ಸೂಚನೆ ನೀಡಬೇಕು ಎಂದು ಮನವಿ ಮಾಡಿದರು.
ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಶಿಕ್ಷಣ ಮತ್ತು ಸಲಹಾ ಸಮಿತಿ ಸದಸ್ಯ ಎಚ್.ವಿ.ರಾಜೀವ ಮಾತನಾಡಿ, ಸಹಕಾರ ಚಳವಳಿ ಬಲಿಷ್ಠ ಹಾಗೂ ವಿಸ್ತಾರಗೊಳಿಸಬೇಕು. ಇದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದರು.
ತರಬೇತಿ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ರಾಷ್ಟ್ರೀಯ ಸಹಕಾರಿ ಯೂನಿಯನ್ ಉಪನಿರ್ದೇಶಕ ಎ.ಆರ್.ಶ್ರೀನಾಥ್ ಅವರು ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಹಕಾರಿಗಳಿಗೆ ಉಪನ್ಯಾಸ ನೀಡಿದರು.
ಮೈಸೂರು, ಮಂಡ್ಯ, ಕೊಡಗು ಜಿಲ್ಲಾ ಸೌಹಾರ್ದ ಸಹಕಾರಿಗಳ ಒಕ್ಕೂಟ ಅಧ್ಯಕ್ಷ ಎಸ್.ಆರ್.ನಾರಾಯಣರಾವ್, ನಿರ್ದೇಶಕ ಎಚ್.ಎನ್.ನವೀನ್, ಮೈಸೂರು ಪ್ರಾಂತೀಯ ವ್ಯವಸ್ಥಾಪಕ ಶಿವಕುಮಾರ ಬಿರಾದಾರ, ಸೋಮಯ್ಯ ಇದ್ದರು.

RELATED ARTICLES
- Advertisment -
Google search engine

Most Popular