Monday, April 21, 2025
Google search engine

Homeರಾಜ್ಯಸುದ್ದಿಜಾಲನರೇಗಾ ಯೋಜನೆಯಡಿ ಕೂಲಿ ದಿನ 100 ರಿಂದ 150ಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಮರು ಪ್ರಸ್ತಾವನೆ ಸಲ್ಲಿಸಲು...

ನರೇಗಾ ಯೋಜನೆಯಡಿ ಕೂಲಿ ದಿನ 100 ರಿಂದ 150ಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಮರು ಪ್ರಸ್ತಾವನೆ ಸಲ್ಲಿಸಲು ಕ್ರಮ: ಪ್ರಿಯಾಂಕ್ ಖರ್ಗೆ

ಬೆಳಗಾವಿ ಸುವರ್ಣ ಸೌಧ: ರಾಜ್ಯದ 31 ಜಿಲ್ಲೆಯ 195 ಬ್ಲಾಕ್‍ಗಳಲ್ಲಿ ಬರಗಾಲ ಪರಿಸ್ಥಿತಿ ಇದ್ದು, ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಲ್ಲಿ ಕೃಷಿ ಕೂಲಿ ಕಾರ್ಮಿಕರಿಗೆ ಉದ್ಯೋಗ ನೀಡುವ 100 ದಿನಗಳನ್ನು 150 ದಿನಗಳಿಗೆ ಹೆಚ್ಚಿಸಿ, 18 ಕೋಟಿ ಮಾನವ ದಿನಗಳನ್ನು ನೀಡಲು ಕೇಂದ್ರಕ್ಕೆ ಈಗಾಗಲೇ ಹಲವಾರು ಬಾರಿ ಮನವಿ ಸಲ್ಲಿಸಲಾಗಿತ್ತು. ಆದರೂ ಪರಿಗಣಿಸದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ಈ ಕುರಿತು ಮರು ಪ್ರಸ್ತಾವನೆ ಸಲ್ಲಿಸಲು ಕ್ರಮವಹಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು ತಿಳಿಸಿದರು.

ವಿಧಾನಸಭೆಯಲ್ಲಿಂದು ಶೂನ್ಯ ವೇಳೆಯಲ್ಲಿ ಶಾಸಕ ಶಿವಲಿಂಗೇಗೌಡ ಅವರು ನರೇಗಾ ಕೂಲಿ ದಿನಗಳ ಹೆಚ್ಚಳದ ಕುರಿತು ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರವು ರಾಜ್ಯದಲ್ಲಿ ಬರ ಪರಿಸ್ಥಿತಿಯನ್ನು ಘೋಷಿಸುವ ಪೂರ್ವದಿಂದಲೇ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ನೀಡುವ ಮಾನವ ದಿನಗಳನ್ನು 100 ರಿಂದ 150ಕ್ಕೆ ಹೆಚ್ಚಿಸಲು ಸೆಪ್ಟೆಂಬರ್ 14 ರಿಂದ ಅಕ್ಟೋಬರ್ 19, 2023 ರವರೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆಯ ಆಯುಕ್ತರು, ಪ್ರಧಾನ ಕಾರ್ಯದರ್ಶಿಗಳು ಮತ್ತು ಸ್ವತ: ಕೇಂದ್ರ ಸಚಿವರಿಗೆ ಪತ್ರ ಬರೆದಿದ್ದು, ಇದಕ್ಕೆ ಉತ್ತರವಾಗಿ ಅಕ್ಟೋಬರ್ 31 ರಂದು ಮರು ಸಂದೇಶ ಬಂದಿದೆ. ಆದರೆ ನಿನ್ನೆ ದಿನ ಸಂಸತ್ ಕಲಾಪದಲ್ಲಿ ಕೇಂದ್ರ ಸಚಿವರು ಕರ್ನಾಟಕ ರಾಜ್ಯ ಸರ್ಕಾರದಿಂದ ಈ ಕುರಿತು ಪ್ರಸ್ತಾವನೆ ಸ್ವೀಕರಿಸಿಲ್ಲ ಎಂದು ತಪ್ಪು ಮಾಹಿತಿ ನೀಡಿದ್ದಾರೆ ಎಂದು ಅವರು ಹೇಳಿದರು.

ರಾಜ್ಯ ಸರ್ಕಾರವು ಈ ಹಿಂದಿನ ಪ್ರಸ್ತಾವನೆಗಳನ್ನು ಉಲ್ಲೇಖಿಸಿ ಮತ್ತೊಮ್ಮೆ, ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ನೀಡುವ ಮಾನವ ದಿನಗಳನ್ನು 100 ರಿಂದ 150ಕ್ಕೆ ಹೆಚ್ಚಿಸಲು ಮರು ಪ್ರಸ್ತಾವನೆಯನ್ನು ಸಲ್ಲಿಸಲಾಗುವುದೆಂದು ಸದನದಲ್ಲಿ ತಿಳಿಸಿದರು.

RELATED ARTICLES
- Advertisment -
Google search engine

Most Popular