ಬಳ್ಳಾರಿ: ತಾಲೂಕಿನ ರೂಪನಗುಡಿ ಸಮುದಾಯ ಆರೋಗ್ಯ ಕೇಂದ್ರದ ವತಿಯಿಂದ ವೈ-ಬೂದಿಹಾಳ್ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಸಕ್ರಿಯ ಕ್ಷಯ ರೋಗ ಪತ್ತೆ ಆಂದೋಲನ ಹಮ್ಮಿಕೊಳ್ಳಲಾಗಿತ್ತು. ರೂಪನಗುಡಿ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಸಕ್ರಿಯ ಕ್ಷಯ ರೋಗ ಪತ್ತೆ ಆಂದೋಲನ ಕಾರ್ಯಕ್ರಮವನ್ನು ಉದ್ದೇಶಿಸಿ ಚಿತ್ರಾ ವರ್ಣೇಕರ್ ಮಾತನಾಡಿ, ಎರಡು ವಾರಗಳಿಗಿಂತ ಹೆಚ್ಚು ಕಾಲ ಕೆಮ್ಮು ಮತ್ತು ಕ್ಷಯರೋಗದಿಂದ ಚೇತರಿಸಿಕೊಂಡವರು ಮತ್ತೊಮ್ಮೆ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರೀಕ್ಷೆ ಮಾಡಿಸಿಕೊಳ್ಳಬೇಕು.
ಈ ಸಂದರ್ಭದಲ್ಲಿ ವೈ ಬೂದಿಹಾಳು ಗ್ರಾಪಂ ಅಧ್ಯಕ್ಷರು, ಸದಸ್ಯರು ಸೇರಿದಂತೆ ಆರೋಗ್ಯ ಕಾರ್ಯಕರ್ತರು, ಆಶಾ ಕಾರ್ಯಕರ್ತೆಯರು ಹಾಗೂ ಎಲ್ಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.