Thursday, April 10, 2025
Google search engine

Homeಅಪರಾಧನಟ ದರ್ಶನ್‌ಗೆ ಆ.14ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

ನಟ ದರ್ಶನ್‌ಗೆ ಆ.14ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಹಾಗೂ ಎಲ್ಲಾ ೧೭ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಆಗಸ್ಟ್ ೧೪ರ ವರೆಗೆ ವಿಸ್ತರಿಸಿ ಬೆಂಗಳೂರಿನ ೨೪ನೇ ಸಿಎಂ ನ್ಯಾಯಾಲಯವು ಆದೇಶ ಹೊರಡಿಸಿದೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆ ನಡೆಸಿದ ನ್ಯಾಯಾಲಯವು, ಆಗಸ್ಟ್ ೧೪ರವರೆಗೆ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಿಸಿ ಬೆಂಗಳೂರಿನ ೨೪ನೇ ACMM ನ್ಯಾಯಾಲಯ ಇದೀಗ ಆದೇಶ ಹೊರಡಿಸಿದೆ.

ಇನ್ನು ನನಗೆ ಜೈಲು ಊಟ ಸೇರುತ್ತಿಲ್ಲ ಇದರಿಂದ ವಾಂತಿ, ಭೇದಿ ಅತಿಸಾರ ಆಗುತ್ತಿದೆ ಎಂದು ನಟ ದರ್ಶನ ಅವರು ಇತ್ತೀಚಿಗೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಮನೆ ಊಟ ಬಟ್ಟೆ ಹಾಗೂ ಇತರೆ ವಸ್ತುಗಳಿಗಾಗಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಅರ್ಜಿಯನ್ನು ವಜಾಗೊಳಿಸಿತ್ತು. ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆದೇಶ ಪ್ರಶ್ನಿಸಿ ಅವರ ಪರ ವಕೀಲರು ಹೈಕೋರ್ಟಿಗೆ ಅರ್ಜಿ ಸಲ್ಲಿಸಿದರು. ಅರ್ಜಿ ವಿಚಾರ ನಡೆಸಿದ ಹೈಕೋರ್ಟ್ ವಿಚಾರಣೆಯನ್ನು ಆಗಸ್ಟ್ ೨೦ ಕ್ಕೆ ಮುಂದೂಡಿತು.

RELATED ARTICLES
- Advertisment -
Google search engine

Most Popular