ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ತನಿಖೆಯ ನಂತ್ರ ಎ.೧ ಆರೋಪಿ ಪವಿತ್ರಾ ಗೌಡ ಸೇರಿದಂತೆ ಇತರೆ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಈಗ ನಟ ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳಿಗೆ ಬೆಂಗಳೂರಿನ ೨೪ನೇ ಎಸಿಎಂಎಂ ಕೋರ್ಟ್ ಜುಲೈ 4ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶಿಸಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದಂತ ಕಾರಣ ನಟ ದರ್ಶನ್ ಅಂಡ್ ಗ್ಯಾಂಗ್ ಅಪಹರಿಸಿಕೊಂಡು ಬಂದು, ಬೆಂಗಳೂರಲ್ಲಿ ಚಿತ್ರ ಹಿಂಸೆ ನೀಡಿ ಹತ್ಯೆಗೈದಿತ್ತು. ಈ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಇತರೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.
ಈ ಪ್ರಕರಣದಲ್ಲಿ ನಟ ದರ್ಶನ್ ಅವರನ್ನು ಕೋರ್ಟ್ ರೇಣುಕಾಸ್ವಾಮಿ ಪ್ರಕರಣದಲ್ಲಿ ಹೆಚ್ಚಿನ ವಿಚಾರಣೆ, ಸ್ಥಳ ಮಹಜರು ನಡೆಸೋದಕ್ಕೆ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು. ಇಂದು ಅವರ ಪೊಲೀಸ್ ಕಸ್ಟಡಿ ಅವಧಿ ಮುಗಿದ ಕಾರಣ, ಬೆಂಗಳೂರಿನ ೫ನೇ ಎಸಿಎಂಎಂ ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಿದ್ದರು.
ಬೆಂಗಳೂರಿನ ೫ನೇ ಎಸಿಎಂಎಂ ಕೋರ್ಟ್ ನ ನ್ಯಾಯಾಧೀಶರಾದಂತ ವಿಜಯ್ ಕುಮಾರ್ ಚಾಟ್ಲಾ ಅವರು ಪ್ರಕರಣದ ವಿಚಾರಣೆ ನಡೆಸಿದರು. ನಟ ದರ್ಶನ್, ವಿನಯ್, ಪ್ರದೋಷ್ ಹಾಗೂ ಧನರಾಜ್ ಅವರಿಗೆ ನ್ಯಾಯಾಂಗ ಬಂಧನಕ್ಕೆ ವಿಧಿಸಿ ಆದೇಶಿಸಿದ್ದಾರೆ. ಹೀಗಾಗಿ ನಟ ದರ್ಶನ್ ಸೇರಿ ನಾಲ್ವರು ಆರೋಪಿಗಳು ಜೈಲು ಪಾಲಾಗಿದ್ದಾರೆ.