ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಹಾಗೂ ಪವಿತ್ರಾ ಗೌಡರ ಜಾಮೀನು ಅರ್ಜಿ ವಿಚಾರಣೆಯನ್ನು ಅಕ್ಟೋಬರ್ ೫ಕ್ಕೆ ಮುಂದೂಡಿ ಕೋರ್ಟ್ ಆದೇಶಿಸಿದೆ.
ಇಂದು ಶುಕ್ರವಾರ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ಎ೨ ದರ್ಶನ್ ಹಾಗೂ ಎ೧ ಪವಿತ್ರಾ ಗೌಡ ಅವರ ಜಾಮೀನು ಅರ್ಜಿ ವಿಚಾರಣೆಯು ೫೭ನೇ ಸೆಷನ್ ಕೋರ್ಟ್‌ನಲ್ಲಿ ನಡೆಯಿತು. ಇದೇ ವೇಳೆ ಪವಿತ್ರಾಗೌಡ ಹಾಗೂ ದರ್ಶನ್ ಅವರ ಜಾಮೀನು ಅರ್ಜಿಯನ್ನೂ ನ್ಯಾಯಾಲಯ ಮುಂದೂಡಿ ಆದೇಶ ಹೊರಡಿಸಿದೆ.