Friday, April 4, 2025
Google search engine

Homeರಾಜ್ಯನಟ ದರ್ಶನ್‌ ಗನ್‌ ಲೈಸೆನ್ಸ್‌ ತಾತ್ಕಾಲಿಕ ರದ್ದು

ನಟ ದರ್ಶನ್‌ ಗನ್‌ ಲೈಸೆನ್ಸ್‌ ತಾತ್ಕಾಲಿಕ ರದ್ದು

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್‌ ಅವರ  ಗನ್ ಲೈಸೆನ್ಸ್ ನ್ನು ತಾತ್ಕಾಲಿಕವಾಗಿ ಅಮಾನತ್ತಿನಲ್ಲಿಡಲಾಗಿದೆ.

ದರ್ಶನ್‌ ಅವರ ಬಳಿಯಿರುವ ಗನ್ ಪರವಾನಗಿಯನ್ನು‌ ತಾತ್ಕಾಲಿಕವಾಗಿ ಅಮಾನತ್ತು ಮಾಡಲಾಗಿದೆ ಎಂದು ಪೊಲೀಸ್‌ ಕಮಿಷನರ್‌ ದಯಾನಂದ್‌ ತಿಳಿಸಿದ್ದಾರೆ.

ಮೂರು ವರ್ಷಕ್ಕಿಂತ ಮೇಲ್ಪಟ್ಟ ಶಿಕ್ಷೆ ವಿಧಿಸಬಹುದಾದ ಕೇಸ್‍ನಲ್ಲಿ ಆರೋಪಿಯಾಗಿರುವ ವ್ಯಕ್ತಿಯ ಬಳಿ ಲೈಸೆನ್ಸ್ ಇರುವ ಗನ್ ಇದ್ದರೆ ಅದನ್ನು ಕೂಡಲೇ ವಶಕ್ಕೆ ಪಡೆಯಲಾಗುತ್ತದೆ. ಅಲ್ಲದೇ ಆ ವ್ಯಕ್ತಿಯ ಲೈಸೆನ್ಸ್ ರದ್ದು ಮಾಡಬಹುದಾಗಿದೆ. ರೇಣುಕಾಸ್ವಾಮಿ ಕೊಲೆ ಕೇಸ್‍ನಲ್ಲಿ ಲೈಸೆನ್ಸ್ ಗನ್ ಬಳಕೆ ಮಾಡಿರೊದು ಎಲ್ಲಿಯೂ ಕಂಡುಬರದ ಕಾರಣ ತಾತ್ಕಾಲಿಕವಾಗಿ ಅಂದರೆ ಕೇಸ್ ಮುಗಿಯುವತನಕ ಅಮಾನತ್ತಿನಲ್ಲಿಡಲು ಪೊಲೀಸರು ನಿರ್ಧರಿಸಿದ್ದಾರೆ.

ನಟ ದರ್ಶನ್ ಗನ್ ಲೈಸೆನ್ಸ್ ರದ್ದು ಮಾಡಲು ಈಗಾಗಲೇ ಪೊಲೀಸರು ನೋಟಿಸ್ ನೀಡಿದ್ದರು. ನೋಟಿಸ್‍ನಲ್ಲಿ, ನೀವು ಕೊಲೆ ಪ್ರಕರಣದ ಆರೋಪಿಯಾಗಿದ್ದೀರಿ. ಜಾಮೀನಿನ ಮೇಲೆ ಹೊರಗಿರುವುದರಿಂದ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಗಳಿವೆ. ಗನ್ ಇರೋದ್ರಿಂದ ಸಾಕ್ಷಿಗಳನ್ನು ಬೆದರಿಸುವ ಬಗ್ಗೆ ಅನುಮಾನ ಇದೆ. ಆದ್ದರಿಂದ ನಿಮ್ಮ ಲೈಸೆನ್ಸ್ ರದ್ದು ಮಾಡಬೇಕಿದೆ. ಈ ಬಗ್ಗೆ ಒಂದು ವಾರದೊಳಗೆ ಉತ್ತರಿಸಬೇಕು. ನೋಟಿಸ್‍ಗೆ ಉತ್ತರ ನೀಡಿದ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದರು.

ಪೊಲೀಸರ ನೋಟಿಸ್‍ಗೆ ಉತ್ತರಿಸಿದ್ದ ದರ್ಶನ್, ನಾನೊಬ್ಬ ಸೆಲೆಬ್ರಿಟಿ ಆಗಿದ್ದೇನೆ. ಭದ್ರತೆಯ ದೃಷ್ಟಿಯಿಂದ ನನಗೆ ಗನ್‌ ಅವಶ್ಯಕತೆ ಇದೆ. ನಾನು ಹೋದ ಕಡೆ ಬಂದ ಕಡೆ ಸಾಕಷ್ಟು ಜನ ಸೇರುತ್ತಾರೆ. ಈ ವೇಳೆ ನನ್ನ ಆತ್ಮರಕ್ಷಣೆಗೆ ಗನ್ ಬೇಕು. ನನ್ನ ಮೇಲಿರೋ ಕೇಸ್‍ನ ಸಮಯದಲ್ಲಿ ಆ ಗನ್ ಬಳಕೆ ಮಾಡಿಲ್ಲ. ಯಾವುದೇ ಕಾರಣಕ್ಕೂ ಗನ್ ದುರ್ಬಳಕೆ ಮಾಡಿಕೊಳ್ಳಲ್ಲ ಎಂದು ಪೊಲೀಸರಿಗೆ ಪತ್ರ ಬರೆದಿದ್ದರು. ಹಾಗಾಗಿ ಗನ್ ಲೈಸೆನ್ಸ್ ಮುಂದುವರೆಸುವಂತೆ ಮನವಿ ಮಾಡಿಕೊಂಡಿದ್ದರು. ಈ ಬಗ್ಗೆ ಪರಿಶೀಲನೆ ನಡೆಸಿದ ಪೊಲೀಸರು ಇದೀಗ ಗನ್‌ ಪರವಾನಗಿಯನ್ನು ತಾತ್ಕಾಲಿಕವಾಗಿ ಅಮಾನತ್ತಿನಲ್ಲಿಡಲು ನಿರ್ಧಾರ ಮಾಡಿದ್ದಾರೆ.

RELATED ARTICLES
- Advertisment -
Google search engine

Most Popular