Friday, May 30, 2025
Google search engine

Homeರಾಜ್ಯನಟ ಕಮಲ್ ಹಾಸನ್ ರಾಜ್ಯದ ಜನರ ಕ್ಷಮೆಯಾಚಿಸಲಿ: ಸಚಿವ ಶಿವರಾಜ್ ತಂಗಡಗಿ ಆಗ್ರಹ

ನಟ ಕಮಲ್ ಹಾಸನ್ ರಾಜ್ಯದ ಜನರ ಕ್ಷಮೆಯಾಚಿಸಲಿ: ಸಚಿವ ಶಿವರಾಜ್ ತಂಗಡಗಿ ಆಗ್ರಹ

ಬೆಂಗಳೂರು: ಕನ್ನಡದ ಭಾಷೆ ಬಗ್ಗೆ ಹಗುರವಾಗಿ ಮಾತನಾಡಿರುವ ನಟ ಕಮಲ್ ಹಾಸನ್ ಅವರು ಕೂಡಲೇ ರಾಜ್ಯದ ಜನರ ಕ್ಷಮೆಯಾಚಿಸಬೇಕು, ಇಲ್ಲದ್ದಿದ್ದರೆ ಅವರ ಚಿತ್ರಗಳಿಗೆ ರಾಜ್ಯದಲ್ಲಿ ನಿರ್ಬಂಧ ಏರುವಂತೆ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರ ಬರೆಯಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ ಅವರು ಹೇಳಿದ್ದಾರೆ.

ವಿಕಾಸಸೌಧದಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕನ್ನಡದ ನೆಲ, ಜಲ, ಭಾಷೆ ವಿಚಾರದಲ್ಲಿ ಯಾವುದೇ ದೊಡ್ಡ ವ್ಯಕ್ತಿ ಇದ್ದರೂ ಅದನ್ನು ಸಹಿಸುವ ಪ್ರಶ್ನೆಯೇ ಇಲ್ಲ. ಕಮಲ್ ಹಾಸನ್ ಅವರು ಕೂಡಲೇ ರಾಜ್ಯದ ಜನರ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.

ಕನ್ನಡದ ಹಲವು ಚಿತ್ರಗಳಲ್ಲಿ ಕಮಲ್‌ ಹಾಸನ್‌ ಅವರು ನಟನೆ ಮಾಡಿದ್ದಾರೆ. ಓರ್ವ ಹಿರಿಯ ನಟ ಈ ರೀತಿ ಹೇಳಿಕೆ ನೀಡುವುದು ಸರಿಯಲ್ಲ. ಅವರ ಚಿತ್ರಗಳಿಗೆ ರಾಜ್ಯದಲ್ಲಿ ಬಿಡುಗಡೆಗೆ ನಿಷೇಧ ಏರುವಂತೆ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರ ಬರೆಯಲಾವುದು ಎಂದು ತಿಳಿಸಿದರು.

ನಟನೆ ಮಾಡಲು ಹಾಗೂ ಹಣ ಸಂಪಾದನೆ ಮಾಡಲು ನಮ್ಮ ಭಾಷೆ ಬೇಕು. ಇದೀಗ ಪುಕ್ಕಟೆ ಪ್ರಚಾರಕ್ಕೆ ಮಾತನಾಡುವುದೇ ? ಈ ಹಿಂದೆ ಸೋನು ನಿಗಮ್‌ಗೆ ಅವರು ಇದೇ ರೀತಿ ಕನ್ನಡಿಗರ ಬಗ್ಗೆ ಮಾತನಾಡಿ, ಬಳಿಕ ಎಚ್ಚೆತ್ತು ಕ್ಷಮೆಯಾಚಿಸಿದ್ದಾರೆ. ಇವರಿಗೆಲ್ಲ ಪಾಠ ಕಲಿಸುವ ಅಗತ್ಯವಿದೆ ಎಂದರು.

ನಟ ಶಿವರಾಜ್‌ ಕುಮಾರ್‌ ಅವರು ಅಲ್ಲಿಯೇ ಇದ್ದು ಈ ಬಗ್ಗೆ ಖಂಡನೆ ಮಾಡಿಲ್ಲ ಎಂಬ ಮಾಧ್ಯಮವರ ಪ್ರಶ್ನೆಗೆ ಪ್ರತಿಕ್ರಿಯಿಸಿ, ಕನ್ನಡಕ್ಕಾಗಿ ರಾಜ್ ಕುಮಾರ್‌ ಅವರು ತನ್ನದೇ ಆದ ಕೊಡುಗೆ ನೀಡಿದ್ದಾರೆ. ಕನ್ನಡ ಕೂಡ ಅವರ ಕುಟುಂಬಕ್ಕೆ ಎಲ್ಲವನ್ನೂ ನೀಡಿದೆ. ಹೀಗಾಗಿ ನಟ ಶಿವರಾಜ್ ಕುಮಾರ್‌ ಅವರು, ಕಮಲ್‌ ಹಾಸನ್‌ ಅವರ ಹೇಳಿಕೆಯನ್ನು ಖಂಡಿಸಬೇಕು ಎಂದು ಒತ್ತಾಯಿಸಿದರು.

RELATED ARTICLES
- Advertisment -
Google search engine

Most Popular