Thursday, April 3, 2025
Google search engine

Homeಸಿನಿಮಾನಟ ಪುನೀತ್ ರಾಜ್ ಕುಮಾರ್ 50ನೇ ಹುಟ್ಟುಹಬ್ಬ: ಅಪ್ಪು ಸಮಾಧಿಗೆ ಕುಟುಂಬಸ್ಥರಿಂದ ಪೂಜೆ ಸಲ್ಲಿಕೆ

ನಟ ಪುನೀತ್ ರಾಜ್ ಕುಮಾರ್ 50ನೇ ಹುಟ್ಟುಹಬ್ಬ: ಅಪ್ಪು ಸಮಾಧಿಗೆ ಕುಟುಂಬಸ್ಥರಿಂದ ಪೂಜೆ ಸಲ್ಲಿಕೆ

ಬೆಂಗಳೂರು: ನಟ ದಿವಂಗತ ಪುನೀತ್ ರಾಜ್ ಕುಮಾರ್ ಅವರ 50ನೇ ವರ್ಷದ ಹುಟ್ಟುಹಬ್ಬವಾಗಿದ್ದು ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ಅಪ್ಪು ಸಮಾಧಿಗೆ ವಿಶೇಷ ಪೂಜೆ ಸಲ್ಲಿಸಿದರು.

ಕಂಠೀರವ ಸ್ಟುಡಿಯೋಗೆ ಆಗಮಿಸಿದ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್, ಪುತ್ರಿಯರಾದ ದೃತಿ, ವಂದಿತಾ ಅವರು ಅಪ್ಪು ಸಮಾಧಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ನಟ ರಾಘವೇಂದ್ರ ರಾಜ್ ಕುಮಾರ್ ಭಾಗಿಯಾಗಿದ್ದರು.

ಅಪ್ಪು ಸಮಾಧಿಗೆ ಹೂಗಳಿಂದ ಅಲಂಕಾರ ಮಾಡಲಾಗಿದ್ದು ಕಂಠೀರವ ಸ್ಟುಡಿಯೋಗೆ ಅಭಿಮಾನಿಗಳ ದಂಡೇ ಆಗಮಿಸುತ್ತಿದೆ. ಇನ್ನು ಯೂತ್ ಬ್ರಿಗೇಡ್ ನಿಂದ್ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಮಾಡಲಾಯಿತು.

RELATED ARTICLES
- Advertisment -
Google search engine

Most Popular