Wednesday, April 9, 2025
Google search engine

Homeರಾಜ್ಯಸುದ್ದಿಜಾಲಮೃತ ಅಭಿಮಾನಿಗಳ ಕುಟುಂಬಕ್ಕೆ ಪರಿಹಾರ ನೀಡಿದ ನಟ ಯಶ್

ಮೃತ ಅಭಿಮಾನಿಗಳ ಕುಟುಂಬಕ್ಕೆ ಪರಿಹಾರ ನೀಡಿದ ನಟ ಯಶ್

ಬೆಂಗಳೂರು: ನಟ ರಾಕಿಂಗ್ ಸ್ಟಾರ್ ಯಶ್ ಅವರ ಹುಟ್ಟುಹಬ್ಬಕ್ಕೆ ಬ್ಯಾನರ್ ಕಟ್ಟಲು ಹೋದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ನಿಧನರಾದ ಅಭಿಮಾನಿಗಳ ಕುಟುಂಬಕ್ಕೆ ನಟ ಯಶ್ ತಲಾ 5 ಲಕ್ಷ ರೂ. ಪರಿಹಾರ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮೃತ ಅಭಿಮಾನಿಗಳಾದ ಮುರಳಿ, ನವೀನ್​ ಮತ್ತು ಹನುಮಂತ ಅವರ ಕುಟುಂಬಸ್ಥರಿಗೆ ಪರಿಹಾರ ಹಣ ತಲುಪಿಸಲಾಗಿದೆ. ಗದಗ ಜಿಲ್ಲೆಯ ಸೊರಣಗಿ ಗ್ರಾಮಕ್ಕೆ ತೆರಳಿ ಮೂವರು ಅಭಿಮಾನಿಗಳ ಕುಟುಂಬಸ್ಥರಿಗೆ ತಲಾ 5 ಲಕ್ಷ ರೂ. ಪರಿಹಾರದ ಚೆಕ್ ಅನ್ನು ನಟ ಯಶ್ ಸ್ನೇಹಿತರು ವಿತರಿಸಿದ್ದಾರೆ ಎಂದು ಹೇಳಲಾಗುತ್ತಿದೆ.
​ ನಟ ಯಶ್ ಹುಟ್ಟು ಹಬ್ಬಕ್ಕೆ ಫ್ಲೆಕ್ಸ್ ಕಟ್ಟಲು ಹೋದ ಮುರಳಿ, ನವೀನ್​ ಮತ್ತು ಹನುಮಂತ ಮೂವರು ಯುವಕರು ವಿದ್ಯುತ್ ಶಾಕ್ ಹೊಡೆದು ಮೃತಪಟ್ಟಿದ್ದರು. ನಂತರ ಯಶ್ ಗ್ರಾಮಕ್ಕೆ ತೆರಳಿ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದರು. ಸಂತ್ರಸ್ತರ ಕುಟುಂಬಕ್ಕೆ ನೆರವಾಗುತ್ತೇನೆಂದು ಮಾತುಕೊಟ್ಟಿದ್ದರು.

RELATED ARTICLES
- Advertisment -
Google search engine

Most Popular