ಬೆಂಗಳೂರು: ‘ಲಕ್ಷ್ಮಿ ನಿವಾಸ’ ಧಾರಾವಾಹಿ ನಟಿ ಚಂದನಾ ಅನಂತಕೃಷ್ಣ ಅವರು ಇಂದು (ನ.28) ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್‌ನಲ್ಲಿ ಅದ್ಧೂರಿಯಾಗಿ ನಟಿಯ ಮದುವೆ ಜರುಗಿದೆ. ಈ ಸಂಭ್ರಮದಲ್ಲಿ ಕಿರುತೆರೆಯ ಕಲಾವಿದರು ಭಾಗಿಯಾಗಿ ಹೊಸ ಜೋಡಿಗೆ ಶುಭಹಾರೈಸಿದ್ದಾರೆ.
ಗುರುಹಿರಿಯರು ನಿಶ್ಚಿಯಿಸಿದ ಮದುವೆ ಇದಾಗಿದ್ದು, ಇತ್ತೀಚೆಗೆ ಕುಟುಂಬಸ್ಥರ ಸಮ್ಮುಖದಲ್ಲಿ ನಟಿಯ ನಿಶ್ಚಿತಾರ್ಥ ಸರಳವಾಗಿ ನಡೆದಿತ್ತು. ಇಂದು ಅದ್ಧೂರಿಯಾಗಿ ಚಂದನಾ ಮತ್ತು ಪ್ರತ್ಯಕ್ಷ್ ಮದುವೆ ನಡೆದಿದೆ.
ಪ್ರತ್ಯಕ್ಷ್ ಅವರು ಉದ್ಯಮಿಯಾಗಿದ್ದಾರೆ. ಪ್ರತ್ಯಕ್ಷ್ ಪೋಷಕರು ಕೂಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ದಿವಂಗತ ಉದಯ್ ಹುತ್ತಿನಗದ್ದೆ ಅವರು ಡಾ.ರಾಜ್‌ಕುಮಾರ್ ಜೊತೆ ದೇವತಾ ಮನುಷ್ಯ ಚಿತ್ರದಲ್ಲಿ ನಟಿಸಿದ್ದರು. ಆರಂಭ, ಅಗ್ನಿಪರ್ವ, ಶುಭ ಮಿಲನ ಸೇರಿದಂತೆ ಹಲವು ಸಿನಿಮಾಗಳಲ್ಲಿ ಅವರು ನಟಿಸಿದ್ದರು. ಅವರ ಪತ್ನಿ ಲಲಿತಾಂಜಲಿ ಉದಯ್ ಕೂಡ ಹಿರಿತೆರೆ, ಕಿರುತೆರೆಯಲ್ಲಿ ಸಕ್ರಿಯರಾಗಿದ್ದಾರೆ.
ಇನ್ನೂ ರಾಜ ರಾಣಿ, ಹೂ ಮಳೆ, ಬಿಗ್ ಬಾಸ್ ಕನ್ನಡ ಸೀಸನ್ 7 ಶೋ ಸೇರಿದಂತೆ ಹಲವು ಪ್ರಾಜೆಕ್ಟ್ಗಳಲ್ಲಿ ಚಂದನಾ ಕಾಣಿಸಿಕೊಂಡಿದ್ದಾರೆ. ಪ್ರಸ್ತುತ ‘ಲಕ್ಷ್ಮಿ ನಿವಾಸ’ ಸೀರಿಯಲ್‌ನಲ್ಲಿ ಜಾಹ್ನವಿ ಪಾತ್ರದ ಮೂಲಕ ಅಭಿಮಾನಿಗಳ ಮನಗೆದ್ದಿದ್ದಾರೆ. ಜೊತೆಗೆ ‘ಭಾವ ತೀರ ಯಾನ’ ಸಿನಿಮಾದಲ್ಲಿ ಧೃತಿ ಪಾತ್ರಕ್ಕೆ ನಟಿ ಜೀವ ತುಂಬಿದ್ದಾರೆ.