ಮಂಡ್ಯ: ನಟಿ ರಾಧಿಕಾ ಕುಮಾರಸ್ವಾಮಿ ಹುಟ್ಟುಹಬ್ಬವನ್ನು ಅಭಿಮಾನಿಯೊಬ್ಬರು ಅರ್ಥಪೂರ್ಣವಾಗಿ ಆಚರಿಸಿದ್ದಾರೆ.
ರಾಧಿಕಾ ಅಭಿಮಾನಿ ವೆಂಕಟೇಶ್ ನೇತೃತ್ವದಲ್ಲಿ ಮಂಡ್ಯದ ಹಳೆನಗರದ ಸರ್ಕಾರಿ ಶಾಲೆ ಆವರಣದಲ್ಲಿ ಹುಟ್ಟುಹಬ್ಬ ಆಚರಣೆ ಮಾಡಲಾಗಿದೆ.

ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ಹಾಗೂ ತೆಂಗಿನ ಗಿಡ ವಿತರಿಸಲಾಗಿದೆ.
ವೆಂಕಟೇಶ್ ಪ್ರತಿ ವರ್ಷ ನಟಿ ರಾಧಿಕಾ ಕುಮಾರಸ್ವಾಮಿ ಹುಟ್ಟುಹಬ್ಬ ಆಚರಿಸಿಕೊಂಡು ಬರುತ್ತಿದ್ದಾರೆ.
ರಾಧಿಕಾ ಕುಮಾರಸ್ವಾಮಿ ಅವರು ಹೆಚ್ಚು ಸಿನಿಮಾಗಳಲ್ಲಿ ನಟಿಸಲಿ. ಅವರಿಗೆ ಮತಷ್ಟು ದೇವರು ಆಯಸ್ಸು ಆರೋಗ್ಯ ಕೊಟ್ಟು ಕಾಪಾಡಲಿ ಎಂದು ವೆಂಕಟೇಶ್ ಪ್ರಾರ್ಥಿಸಿದ್ದಾರೆ.
