ಬೆಂಗಳೂರು : ನಟಿ ರಮ್ಯಾ ಗೆ ದರ್ಶನ್ ಫ್ಯಾನ್ಸ್ ಅಶ್ಲೀಲ ಮೆಸೇಜ್ ವಿಚಾರವಾಗಿ ಇದೀಗ ಬೆಂಗಳೂರು ಪೊಲೀಸ್ ಕಮಿಷನರ್ ಗೆ ಕೆಪಿಸಿಸಿ ಮಹಿಳಾ ಘಟಕ ದೂರು ನೀಡಿದೆ. ಮಹಿಳಾ ಕಾಂಗ್ರೆಸ್ ಅಧ್ಯಕ್ಷೇ ಸೌಮ್ಯ ರೆಡ್ಡಿ ಈ ಕುರಿತು ದೂರು ನೀಡಿದ್ದಾರೆ.
ದರ್ಶನ್ ಅಭಿಮಾನಿಗಳು ನಟಿ ರಮ್ಯಾ ಗೆ ಅಶ್ಲೀಲ ಮೆಸೇಜ್ ಕಳುಹಿಸಿದರ ಕುರಿತು ಸದ್ಯ ಭಾರಿ ಚರ್ಚೆ ಆಗುತ್ತಿದ್ದು, ರಮ್ಯಾ ಅವರು ಕೂಡ ನಿನ್ನೆ ಕಮಿಷನರ್ ಗೆ ದೂರು ನೀಡಿದ್ದಾರೆ. ಇದರ ಬೆನ್ನಲ್ಲೇ, ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷ ಹಾಗೂ ಮಾಜಿ ಶಾಸಕಿ ಸೌಮ್ಯ ರೆಡ್ಡಿ ಅವಹೇಳನಕಾರಿ ಸಂದೇಶಗಳನ್ನು ಪರಿಶೀಲಿಸಬೇಕು ಸರಿಯಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಿ ಎಂದು ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.