ಬೆಂಗಳೂರು: ನಟಿ ರಮ್ಯಾ ಗೆ ಅಶ್ಲೀಲ ಮೆಸೇಜ್ ಕಳುಹಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಸಿಸಿಬಿ ಪೊಲೀಸರು ಐಪಿ ಅಡ್ರೆಸ್ ಮುಖಾಂತರ ಆರೋಪಿಗಳನ್ನು ಪತ್ತೆ ಮಾಡಿ, ಐದಕ್ಕೂ ಹೆಚ್ಚು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಇದೀಗ ಐಪಿ ಅಡ್ರೆಸ್ ಮೂಲಕ ವಿಜಯಪುರದಲ್ಲಿ ಮತ್ತೊಬ್ಬ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಪ್ರಕರಣ ಸಂಬಂಧ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ನಟಿ ರಮ್ಯಾ ಗೆ ಅಶ್ಲೀಲ ಮೆಸೇಜ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಜಯಪುರ ಮೂಲದ ದರ್ಶನ ಅಭಿಮಾನಿ ಸಂತೋಷ್ ಎನ್ನುವ ಆರೋಪಿಯನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ವಿಜಯಪುರದಲ್ಲಿ ಆರೋಪಿ ಸಂತೋಷ್ ಗಾರೆ ಕೆಲಸ ಮಾಡಿಕೊಂಡಿದ್ದ. ಸೋಶಿಯಲ್ ಮೀಡಿಯಾದಲ್ಲಿ ಆರೋಪಿ ನಟಿ ರಮ್ಯಾ ಗೆ ಅಶ್ಲೀಲ ಮೆಸೇಜ್ ಕಳುಹಿಸಿದ್ದ. ನಮ್ಮ ಬಾಸ್ ತಂಟೆಗೆ ಬರಬೇಡ ಎಂದು ನಟಿ ರಮ್ಯಾ ಅವರಿಗೆ ಕೆಟ್ಟದಾಗಿ ಮೆಸೇಜ್ ಕಳುಹಿಸಿದ್ದ. ಐಪಿ ಅಡ್ರೆಸ್ ಮೂಲಕ ಇದೀಗ ಸಿಸಿಬಿ ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ.