Thursday, July 17, 2025
Google search engine

Homeಅಪರಾಧನಟಿ ರನ್ಯಾ ರಾವ್‌ಗೆ ಚಿನ್ನದ ಅಕ್ರಮ ಸಾಗಣೆ ಪ್ರಕರಣದಲ್ಲಿ 1 ವರ್ಷ ಜೈಲು

ನಟಿ ರನ್ಯಾ ರಾವ್‌ಗೆ ಚಿನ್ನದ ಅಕ್ರಮ ಸಾಗಣೆ ಪ್ರಕರಣದಲ್ಲಿ 1 ವರ್ಷ ಜೈಲು

ಬೆಂಗಳೂರು: ಸ್ಯಾಂಡಲ್ ವುಡ್ ನಟಿ ರನ್ಯಾ ರಾವ್ ಚಿನ್ನದ ಅಕ್ರಮ ಸಾಗಣೆ ಪ್ರಕರಣದಲ್ಲಿ ಬಂಧಿತರಾಗಿ ಇದೀಗ 1 ವರ್ಷದ ಜೈಲು ಶಿಕ್ಷೆಗೆ ಒಳಗಾಗಿದ್ದಾರೆ. ಕಾಫಿ ಪೋಸಾ ಅಡ್ವೈಸರಿ ಬೋರ್ಡ್ ಈ ಬಗ್ಗೆ ಆದೇಶ ಹೊರಡಿಸಿದ್ದು, ಆರೋಪಿಗಳಿಗೆ ಜಾಮೀನು ಕೋರುವ ಅವಕಾಶವಿಲ್ಲ ಎಂಬುದಾಗಿ ಸ್ಪಷ್ಟಪಡಿಸಿದೆ. ರನ್ಯಾ ರಾವ್ ಸೇರಿದಂತೆ ಮೂವರು ಆರೋಪಿಗಳಿಗೆ ಈ ಶಿಕ್ಷೆ ವಿಧಿಸಲಾಗಿದೆ.

ಡಿ.ಆರ್.ಐ ಈ ಮಾಹಿತಿಯನ್ನು ಜೈಲು ಅಧಿಕಾರಿಗಳಿಗೆ ರವಾನಿಸಿದ್ದು, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 14.8 ಕೆಜಿ ಚಿನ್ನದೊಂದಿಗೆ ರನ್ಯಾ ರಾವ್ ಬಂಧಿತರಾಗಿದ್ದರು. ಇದು ಕರ್ನಾಟಕದಲ್ಲಿ ದಾಖಲಾಗಿರುವ ಅತಿದೊಡ್ಡ ಚಿನ್ನದ ಅಕ್ರಮ ಸಾಗಣೆ ಪ್ರಕರಣವೆಂದು ತಿಳಿದುಬಂದಿದೆ. ರನ್ಯಾ, ಡಿಜಿಪಿ ಡಾ. ಕೆ. ರಾಮಚಂದ್ರರಾವ್ ಅವರ ಮಲಮಗಳಾಗಿದ್ದಾರೆ.

RELATED ARTICLES
- Advertisment -
Google search engine

Most Popular