Saturday, April 19, 2025
Google search engine

Homeರಾಜ್ಯಸುದ್ದಿಜಾಲಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಅಪರ ಜಿಲ್ಲಾಧಿಕಾರಿ ಕರೆ

ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಅಪರ ಜಿಲ್ಲಾಧಿಕಾರಿ ಕರೆ

ರಾಮನಗರ: ಪ್ರವಾಸೋದ್ಯಮ ಕುರಿತು ಅರಿವು ಮೂಡಿಸಲು ಪ್ರತೀ ವರ್ಷ ಸೆ.೨೭ ರಂದು ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ಆಚರಿಸಲಾಗುತ್ತಿದೆ ಎಂದು ಅಪರ ಜಿಲ್ಲಾಧಿಕಾರಿ ಆರ್. ಚಂದ್ರಯ್ಯ ಅವರು ಅಭಿಪ್ರಾಯಪಟ್ಟರು.

ಅವರು ಸೆ.೨೭ರ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪ್ರವಾಸೋದ್ಯಮ ಇಲಾಖೆ, ಬೆಂಗಳೂರಿನ ಚೇತನ ಸಂಸ್ಥೆ ಹಾಗೂ ರಾಮನಗರ ಟೂರಿಸಂ ಸೊಸೈಟಿಯ ಸಂಯುಕ್ತಾಶ್ರಯದಲ್ಲಿ ಇಲ್ಲಿನ ಗೋಪಾಲಪುರ ಗ್ರಾಮದ ಸ್ವಾಮಿ ಬೆಟ್ಟದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಜ್ಞಾನ ಬಂಡಾರ ವೃದ್ಧಿಸಲು ಪುಸ್ತಕಗಳನ್ನು ಓದುವುದರ ಜೊತೆಗೆ ಪ್ರವಾಸಿ ತಾಣಗಳಿಗೆ ಭೇಟಿ ನೀಡಬೇಕು ಅಲ್ಲಿನ ಇತಿಹಾಸದ ಕುರಿತು ತಿಳಿದುಕೊಳ್ಳಬೇಕು. ರಾಮನಗರ ಜಿಲ್ಲೆ ಬೆಂಗಳೂರುಸಮೀಪದಲ್ಲಿರುವ ಕಾರಣಇಲ್ಲಿನ ಪ್ರವಾಸಿ ತಾಣಗಳಿಗೆ ಹಾಗೂ ಸಾರ್ವಜನಿಕ ರಜಾ ದಿನಗಳಲ್ಲಿ ಅತೀ ಹೆಚ್ಚು ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ. ಇದರಿಂದಶೇ. ೫೦ ರಷ್ಟು ಆದಾಯವು ಬರುತ್ತಿದೆ ಎಂದರು.

ಪ್ರವಾಸಿ ತಾಣಗಳಿಗೆ ಭೇಟಿ ನೀಡುವ್ಯದರಿಂದ ದೈಹಿಕ ವ್ಯಾಯಾಮ ಹಾಗೂ ಮಾನಸಿಕವಾಗಿನೆಮ್ಮದಿ ಸಿಗುತ್ತದೆ. ಸರ್ಕಾರದ ಜೊತೆ ಖಾಸಗಿ ಸಂಸ್ಥೆಗಳು ಒಗ್ಗೂಡಿದರೆ ಜಿಲ್ಲೆಯಲ್ಲಿರುವ ಪ್ರವಾಸಿ ತಾಣಗಳು ಮತ್ತಷ್ಟು ಅಭಿವೃದ್ಧಿ ಹೊಂದುತ್ತದೆ ಎಂದು ತಿಳಿಸಿದರು. ರಾಮನಗರ ಟೂರಿಸಂ ಸೂಸೈಟಿ ಅಧ್ಯಕ್ಷ ವಿಜಯದೇವ್ ಮಾತನಾಡಿದರು. ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾಗಿದ್ದಚಾರಣ ಹಾಗೂ ಶಿಲಾರೋಹಣಕ್ಕೆ ಅಪರ ಜಿಲ್ಲಾಧಿಕಾರಿಗಳು ಚಾಲನೆ ನೀಡಿದರು.

ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ರವಿ ಕುಮಾರ್ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಮಾಯಗಾನಹಳ್ಳಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ವೆಂಕಟೇಶಮೂರ್ತಿ,ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸತೀಶ್, ಅಗ್ನಿಶಾಮಕ ಅಧಿಕಾರಿ ಮೋಹನ್ ಮುದಿಗೌಡ,ಹೋಂ ಸ್ಟೇ ಮತ್ತು ರೆಸಾರ್ಟ್‌ಗಳ ಮಾಲೀಕರು, ಚೇತನಾ ಸಂಸ್ಥೆ ಚಾರಣ ಪ್ರಿಯರು ಹಾಗೂ ಪ್ರವಾಸಿ ಮಿತ್ರರು ಭಾಗವಹಿಸಿದ್ದರು.

RELATED ARTICLES
- Advertisment -
Google search engine

Most Popular