Friday, April 11, 2025
Google search engine

Homeಅಪರಾಧಅಯೋಧ್ಯೆಯ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಶವವಾಗಿ ಪತ್ತೆ

ಅಯೋಧ್ಯೆಯ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಶವವಾಗಿ ಪತ್ತೆ

ಲಕ್ನೋ: ಅಯೋಧ್ಯೆಯ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಗುರುವಾರ ತಮ್ಮ ಅಧಿಕೃತ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.


ಸುರ್ಜಿತ್ ಸಿಂಗ್ (58) ಕೊತ್ವಾಲಿ ನಗರದ ಸಿವಿಲ್ ಲೈನ್ಸ್ ಪ್ರದೇಶದ ಸುರ್ಸಾರಿ ಕಾಲೋನಿಯಲ್ಲಿರುವ ತಮ್ಮ ನಿವಾಸದಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಸಾವಿಗೆ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಸಿಂಗ್ ಮಧುಮೇಹ ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದರು. ಹಾಗಾಗಿ ಮೆದುಳು ರಕ್ತಸ್ರಾವದಿಂದ ಸಾವಾಗಿರಬಹುದು ಎಂದು ಅಂದಾಜಿಸಲಾಗಿದೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ಅಯೋಧ್ಯೆ ವಿಭಾಗೀಯ ಆಯುಕ್ತ ಗೌರವ್ ದಯಾಳ್, ಡಿಎಂ ಚಂದ್ರ ವಿಜಯ್ ಸಿಂಗ್, ಸಂಸದ ಅವಧೇಶ್ ಪ್ರಸಾದ್, ಮೇಯರ್ ಗಿರೀಶ್ಪತಿ ತ್ರಿಪಾಠಿ, ಅಯೋಧ್ಯೆ ಎಸ್ಪಿ ಮತ್ತು ಇತರ ಹಿರಿಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಎಡಿಎಂ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

RELATED ARTICLES
- Advertisment -
Google search engine

Most Popular