ಬೆಳಗಾವಿ : ಜಿಲ್ಲೆಯ ಹುಕ್ಕೇರಿ ತಾಲೂಕಿನ ಹತ್ತರಗಿ ಟೋಲ್ ಬಳಿ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲ್ಲು ತೂರಾಟದಲ್ಲಿ ಗಾಯಗೊಂಡ ಪೊಲೀಸರನ್ನು ಎಡಿಜಿಪಿ ಹೀತೇಂದ್ರ.ಆರ್ ಭೇಟಿ ಮಾಡಿದರು.
ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿರುವ ಪೊಲೀಸರ ಆರೋಗ್ಯ ವಿಚಾರಿಸಿದರು. ನಗರದ ಕೆಎಲ್ಇ ಆಸ್ಪತ್ರೆ ದಾಖಲಾಗಿರುವ ಗಾಯಾಳು ಪೊಲೀಸರು ದಾಖಲಾಗಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿದ ಬಳಿಕ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಅವರು ಘಟನೆಯಲ್ಲಿ ನಮ್ಮ 11 ಜನ ಸಿಬ್ಬಂದಿಗೆ ಗಾಯಗಳಾಗಿವೆ. ಯಾವುದೇ ರೀತಿ ಅಹಿತಕರ ಘಟನೆ ನಡೆಯಬಾರದೆಂದು ಅಂದುಕೊಂಡಿದ್ದೆವು. ಆದರೂ ನಡೆದಿದೆ. ಹಾಗಾಗಿ ನಾನೇ ಖುದ್ದಾಗಿ ರಾತ್ರಿ ಬೆಳಗಾವಿಗೆ ಬಂದಿದ್ದೇನೆ. ನಮ್ಮ ಸಿಬ್ಬಂದಿಯ ಆರೋಗ್ಯ ವಿಚಾರಿಸಿದ್ದೇನೆ. ಘಟನಾ ಸ್ಥಳದಲ್ಲಿದ್ದ 40-50 ಸಿಸಿಟಿವಿ ಪರಿಶೀಲನೆ ನಡೆಸುತ್ತಿದ್ದೇವೆ. ಈಗಾಗಲೇ ಘಟನೆ ಕುರಿತು ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದರು.
ರೈತರ ಪ್ರತಿಭಟನೆಯಲ್ಲಿ ಒಂದು ದೊಡ್ಡ ಮಾಬು ಕ್ರೀಯೇಟ್ ಆಗಿರುವುದರಿಂದ ಘಟನೆಯಾಗಿದೆ. ನಾವು ಯಾರಿಗೂ ಲಾಠಿಯಿಂದ ಹೊಡೆಯಿರಿ ಅಂತ ನಿರ್ದೇಶನ ಕೊಟ್ಟಿಲ್ಲ. ರೈತರನ್ನು ಕಂಟ್ರೋಲ್ ಮಾಡಲು ಪ್ರಯತ್ನ ಮಾಡಿದ್ದೇವೆ. ಕಿಡಿಗೇಡಿಗಳು ಮಾಡಿರಬಹುದು ಎಂದು ನೋಡುತ್ತಿದ್ದೇವೆ. ಎಲ್ಲವನ್ನೂ ಪರಿಶೀಲನೆ ಮಾಡುತ್ತಿದ್ದೇವೆ. ನಾನು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ. ಈಗಾಗಲೇ 4-5 ಸರ್ಕಾರಿ ವಾಹನಗಳು ಹಾಗೂ ಇನ್ನಿತರ ವಾಹನಗಳು ಸೇರಿ 10 ಕ್ಕೂ ಹೆಚ್ಚು ಹಾನಿಯಾಗಿದೆ. ಇದುವರೆಗೂ ಯಾರನ್ನೂ ವಶಕ್ಕೆ ಪಡೆದಿಲ್ಲ. ಕೆಲವು ವಿಡಿಯೋಗಳನ್ನು ಪರಿಶೀಲನೆ ಮಾಡಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.



