ಬೆಂಗಳೂರು : ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಬೆಂಗಳೂರಿನ ಜನಪ್ರತಿನಧಿಗಳ ವಿಶೇಷ ಕೋರ್ಟ್ ಆದೇಶ ನೀಡಿದ್ದು, ಇಂದು ಶುಕ್ರವಾರ ಸಿಎಂ ಸಿದ್ದರಾಮಯ್ಯ ಸೇರಿದಂತೆ ಕುಟುಂಬಸ್ಥರ ವಿರುದ್ಧ ಎಫ್ ಐಆರ್ ದಾಖಲಿಸಲು ಮೈಸೂರು ಲೋಕಾಯುಕ್ತ ಎಡಿಜಿಪಿ ಮನೀಶ್ ಖರ್ಬಿಕರ್ ಸೂಚನೆ ನೀಡಿದ್ದಾರೆ.
ಮೈಸೂರು ಲೋಕಾಯುಕ್ತ ಎಸ್ ಪಿ ಉದೇಶ್ ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲಿಸುವ ಸಾಧ್ಯತೆ ಇದೆ. ದೂರುದಾರ ಸ್ನೇಹಮಯಿ ಕೃಷ್ಣ ಅವರ ದೂರಿನ ಮೇರೆಗೆ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ನೀಡಿದ್ದು, ಸ್ನೇಹಮಯಿ ಕೃಷ್ಣ ದೂರಿನ ಮೇರೆಗೆ ಸಿಎಂ ಸಿದ್ದರಾಮಯ್ಯ ಎ೧, ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಎ೨, ಪತ್ನಿ ಸಹೋದರ ಮಲ್ಲಿಕಾರ್ಜನ್ ಸ್ವಾಮಿ ಎ೩, ಜಮೀನು ಮಾರಿದ ದೇವರಾಜು ಎ೪ ಹಾಗೂ ಇತರರ ವಿರುದ್ಧ ದೂರು ದಾಖಲಿಸಲು ಮೈಸೂರು ಲೋಕಾಯುಕ್ತ ಸಿದ್ಧತೆ ನಡೆಸಿದೆ.
ಮೈಸೂರು ಜಿಲ್ಲಾ ಲೋಕಾಯುಕ್ತ ಎಸ್ಪಿ ಉದೇಶ್ ಹೈಕೋರ್ಟ್ ಮತ್ತು ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶ ಪ್ರತಿಗಳನ್ನು ಅಧಿಕೃತವಾಗಿ ಪಡೆದುಕೊಂಡು ಲೋಕಾಯುಕ್ತ ಪ್ರಧಾನ ಕಚೇರಿಗೆ ಭೇಟಿ ನೀಡಿ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದು, ಲೋಕಾಯುಕ್ತ ಎಡಿಜಿಪಿ ಮನೀಶ್ ಖರ್ಬಿಕರ್ ಸೂಚನೆ ಮೇರೆಗೆ ಅಖPಅ ಸೆಕ್ಷನ್ ಅಡಿಯಲ್ಲಿ ಎಫ್ ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಸೂಚನೆ ನೀಡಿದ್ದು, ಕೆಲವೇ ಗಂಟೆಗಳಲ್ಲಿ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲಾಗಲಿದೆ.