Friday, April 11, 2025
Google search engine

Homeರಾಜ್ಯಸುದ್ದಿಜಾಲಡೆಂಗಿ ನಿಯಂತ್ರಣ ಕ್ರಮಗಳ ಪಾಲಿಸುವಂತೆ ಸಲಹೆ: ಬಿ.ಎಸ್.ಗಂಗಾಧರ್

ಡೆಂಗಿ ನಿಯಂತ್ರಣ ಕ್ರಮಗಳ ಪಾಲಿಸುವಂತೆ ಸಲಹೆ: ಬಿ.ಎಸ್.ಗಂಗಾಧರ್

ರಾಮನಗರ ಡೆಂಗಿ ವಿರೋಧ ಮಾಸಾಚರಣೆ ಅಂಗವಾಗಿ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಿದ್ದು ಡೆಂಗಿ ಜ್ವರವು ವೈರಸ್ ನಿಂದ ಬರುತ್ತದೆ. ಹಗಲು ಹೊತ್ತಿನಲ್ಲಿ ಕಚ್ಚುತ್ತವೆ ಸೋಂಕಿತ ಈಡಿಸ್ ಸೊಳ್ಳೆಗಳಿಂದ ಡೆಂಗಿ ಜ್ವರ ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತದೆ. ವಿಪರೀತ ಜ್ವರ, ಮೈಮೇಲೆ ಕೆಂಪು ಗಂಧೆಗಳು, ಕಣ್ಣಿನ ಹಿಂಬಾಗ ನೋವು, ತಲೆ ನೋವು, ಮಾಂಸಖಂಡಗಳ ನೋವು, ಈ ರೋಗದ ಪ್ರಮುಖ ಲಕ್ಷಣಗಳಾಗಿದ್ದು ರೋಗ ತೀರ್ವ ಸ್ಥಿತಿ ತಲುಪಿದಾಗ ಬಾಯಿ, ಮೂಗು ಮತ್ತು ವಸಡುಗಳಿಂದ ರಕ್ತಸ್ರಾವ ಹಾಗೂ ಚರ್ಮದ ಮೇಲೆ ರಕ್ತಸ್ರಾವದ ಗುರುತು ಕಾಣಿಸಿಕೊಳ್ಳುತ್ತವೆ. ಇಂತಹ ಲಕ್ಷಣಗಳು ಕಂಡು ಬಂದ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು. ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಸೇವೆ ನೀಡಲಾಗುತ್ತಿದ್ದು. ಒಂದು ವೇಳೆ ಡೆಂಗಿಯೆಂದು ದೃಢಪಟ್ಟಲ್ಲಿ ಲಕ್ಷಣಗಳಿಗೆ ಅನುಗುಣವಾಗಿ ಚಿಕಿತ್ಸೆ ನೀಡಿ ಗುಣ ಪಡಿಸಬಹುದು. ಹಾಗೂ ಡೆಂಗಿಯಿಂದ ಉಂಟಾಗುವ ಸಾವು-ನೋವುಗಳನ್ನು ತಪ್ಪಿಸಬೇಕಾದರೆ ಮುಖ್ಯವಾಗಿ ನಿಯಂತ್ರಣ ಕ್ರಮಗಳನ್ನು ಪಾಲಿಸುವಂತೆ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಎಸ್. ಗಂಗಾಧರ್ ಅವರು ತಿಳಿಸಿದರು.

ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಚೇರಿ, ಸರ್ಕಾರಿ ಪ್ರೌಢಶಾಲೆ ಪಾದರಹಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಪ್ರೌಢಶಾಲಾ ಆವರಣದಲ್ಲಿ ಡೆಂಗಿ ವಿರೋಧ ಮಾಸಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. 

ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಬಿ. ವಿನಯ್ ಕುಮಾರ್ ಅವರು ಮಾತನಾಡಿ, ಸೊಳ್ಳೆಗಳ ನಿಯಂತ್ರಣ ಒಂದೇ ಡೆಂಗಿ ರೋಗದ ಹತೋಟಿಗೆ ಮುಖ್ಯ ವಿಧಾನ. ಈ ಸೊಳ್ಳೆಗಳು ನೀರು ಶೇಕರಣೆ ಪರಿಕರಗಳಾದ ಸಿಮೆಂಟ್ ತೊಟ್ಟಿ, ಬ್ಯಾರಲ್, ಮಣ್ಣಿನ ಮಡಿಕೆ ಇವುಗಳನ್ನು ವಾರಕೊಮ್ಮೆ ಸ್ವಚ್ಛಗೊಳಿಸಬೇಕು ಹಾಗೂ ಈಗಾಗಲೆ ಅಕಾಲಿಕ ಮಳೆ ಪ್ರಾರಂಭವಾಗಿದ್ದು ಘನತ್ಯಾಜ್ಯಗಳಾದ ಟೈರು, ಎಳನೀರ ಚಿಪ್ಪು, ಒಡೆದ ಪ್ಲಾಸ್ಟಿಕ್ ವಸ್ತುಗಳು ಹಾಗೂ ಅನುಪಯುಕ್ತ ಒರಳುಕಲ್ಲು ಇವುಗಳಲ್ಲಿ ನೀರು ನಿಂತು ಸೊಳ್ಳೆಗಳ ಉತ್ಪತ್ತಿ ತಾಣಗಳಾಗಿರುತ್ತವೆ. ಆದ್ದರಿಂದ ನೀರು ನಿಲ್ಲದಂತೆ ಕ್ರಮವಹಿಸಿ ಪರಿಸರ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಶಾಲೆಯ ಆವರಣದಲ್ಲಿ ಘನತ್ಯಾಜ್ಯ ವಸ್ತುಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಹಾಗೂ ಸೊಳ್ಳೆ ಕಡಿತದಿಂದ ಪಾರಾಗಲು ಸೊಳ್ಳೆ ಪರದೆ ಬಳಕೆ, ಮೈತುಂಬ ಬಟ್ಟೆಧರಿಸುವುದು, ಸಂಜೆ ವೇಳೆ ಬೇವಿನ ಸೊಪ್ಪಿನ ಹೊಗೆ, ಸಾಂಮ್ರಾಣಿ ಧೂಪಹಾಕುವುದು, ಸೊಳ್ಳೆ ನಿರೋಧಕಗಳ ಬಳಕೆ ಹಾಗೂ ಪರಿಸರ ಸ್ವಚ್ಛತೆ ಕಾಪಾಡಿಕೊಳ್ಳುವಂತೆ ಮಕ್ಕಳಿಗೆ ತಿಳಿಸಿದರು.

ಮುಖ್ಯ ಶಿಕ್ಷಕರಾಧ ಢಾಕ್ಯಾನಾಯಕ ಅವರು ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿ, ಆರೋಗ್ಯ ಇಲಾಖೆ ವತಿಯಿಂದ ಡೆಂಗಿ ನಿಯಂತ್ರಣದ ಬಗ್ಗೆ ಜಾಗೃತಿ ಮೂಡಿಸುತ್ತಿರುವುದು ಸಂತೋಷದ ವಿಷಯ ಇದರಿಂದ ಮಕ್ಕಳು ಜಾಗೃತರಾಗಿ ನಿಯಂತ್ರಣ ಕ್ರಮಗಳನ್ನು ಅನುಸರಿಸಿ ಡೆಂಗಿಯಿಂದ ಉಂಟಾಗುವ ಸಾವು-ನೋವುಗಳನ್ನು ತಪ್ಪಿಸಬಹುದು ತಾವೆಲ್ಲರೂ ಜಾಗೃತರಾಗಿ ಪೋಷಕರಿಗೆ ಮಾಹಿತಿ ತಿಳಿಸುವಂತೆ ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಹಿರಿಯ ಪ್ರಾಥಮಿಕ ಪಾಠ ಶಾಲೆ ಮುಖ್ಯ ಶಿಕ್ಷಕರಾದ ರಾಮಕೃಷ್ಣಯ್ಯ, ಶಿಕ್ಷಕರಾದ ರಂಗಪ್ಪ, ನಾಹೀನಖಾನಂ, ನಾಗರತ್ನ, ಸುಪ್ರಿಯ, ರವಿಕುಮಾರ್, ಸುನಿತಾ, ಜ್ಞಾನವಿಕಾಸ ಕೇಂದ್ರದ ಮೇಲ್ವಿಚಾರಕರಾದ ಗೀತ, ಸೇವಾ ಪ್ರತಿನಿಧಿ ವೀಣಾ, ಶಾಲಾ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

RELATED ARTICLES
- Advertisment -
Google search engine

Most Popular