ಮಂಡ್ಯ: ಸುಪ್ರೀಂ ಕೋರ್ಟ್ ವಿಚಾರಣೆ ಮುಂದೂಡಿದ ಹಿನ್ನೆಲೆಯಲ್ಲಿ ತೀವ್ರಗೊಂಡ ಪ್ರತಿಭಟನೆ ಮಂಡ್ಯದಲ್ಲಿ ಕಾವೇರಿ ಕಿಚ್ಚು ಹೆಚ್ಚಾಗಿದ್ದು, ಶಾಂತಿಯುತವಾಗಿ ಪ್ರತಿಭಟನೆ ಮಾಡುತ್ತಿದ್ದವರು ಏಕಾಏಕಿ ಬೆಂ-ಮೈ ಹೆದ್ದಾರಿ ತಡೆದು ಅಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಡ್ಯದ ವಿಶ್ವೇಶ್ವರ ಪ್ರತಿಮೆ ಎದುರು ಕಳೆದ 7 ದಿನಗಳಿಂದ ಶಾಂತಿಯುತವಾಗಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದು ಪ್ರತಿಭಟನಾಕಾರರು, ಇಂದು ರಸ್ತೆ ಮಧ್ಯೆ ಕುಳಿತು ರಾಜ್ಯ ಸರ್ಕಾರ ಹಾಗೂ ಸಂಸದರು ಹಾಗೂ ಶಾಸಕರ ವಿರುದ್ಧ ಘೋಷಣೆ ಕೂಗಿದರು.