Friday, July 3, 2026
Google search engine

Homeರಾಜಕೀಯಕ್ವಾರಿ ದುರಂತಕ್ಕೆ ಆಡಳಿತ ವೈಫಲ್ಯವೇ ಕಾರಣ : ವಿರೋಧ ಪಕ್ಷದ ನಾಯಕ ಆರ್.ಅಶೋಕ್

ಕ್ವಾರಿ ದುರಂತಕ್ಕೆ ಆಡಳಿತ ವೈಫಲ್ಯವೇ ಕಾರಣ : ವಿರೋಧ ಪಕ್ಷದ ನಾಯಕ ಆರ್.ಅಶೋಕ್

ಬೆಂಗಳೂರು : ಬೆಂಗಳೂರು ದಕ್ಷಿಣ ಜಿಲ್ಲೆಯ ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಕುಸಿದು ಏಳು ಕಾರ್ಮಿಕರು ಮೃತಪಟ್ಟಿರುವ ದುರಂತಕ್ಕೆ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ.

ಘಟನೆಯ ಬಳಿಕ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳನ್ನು ವಿಚಾರಿಸಿದ ನಂತರ ಮಾತನಾಡಿದ ಅವರು, ಮೃತರ ಕುಟುಂಬಗಳಿಗೆ ತಲಾ 50 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು. ಗಾಯಾಳುಗಳಿಗೆ ತಲಾ 10 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಸಹ ಒತ್ತಾಯಿಸಿದ್ದಾರೆ.

ಇನ್ನೂ ಕ್ವಾರಿ ಹಾಗೂ ಗಣಿಗಾರಿಕೆ ಪ್ರದೇಶಗಳಲ್ಲಿ ವ್ಯಾಪಕ ಅಕ್ರಮ ನಡೆಯುತ್ತಿದ್ದು, ರಾಜಕಾರಣಿಗಳ ಹೆಸರು ಬಳಸಿಕೊಂಡು ಲೈಸೆನ್ಸ್ ಇಲ್ಲದೆ ಕಾರ್ಯಾಚರಣೆ ನಡೆಯುತ್ತಿದೆ ಎಂದು ಆರೋಪಿಸಿದ ಅವರು, ಬೆಂಗಳೂರಿನಿಂದ ಅತಿ ಸಮೀಪದಲ್ಲೇ ಇರುವ ಕ್ವಾರಿಗಳಲ್ಲಿ ನಿಯಮಿತ ಪರಿಶೀಲನೆ ನಡೆಯದಿರುವುದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ವಿಫಲತೆಯನ್ನು ತೋರಿಸುತ್ತದೆ ಎಂದು ಟೀಕಿಸಿದರು.

ಈ ದುರಂತಕ್ಕೆ ಕಾರಣರಾದವರನ್ನು ತಕ್ಷಣ ಬಂಧಿಸಬೇಕು ಎಂದು ಆಗ್ರಹಿಸಿದ ಅವರು, ಸರ್ಕಾರದ ನಿರ್ಲಕ್ಷ್ಯದಿಂದಲೇ ಇಂತಹ ಘಟನೆ ಪುನರಾವರ್ತನೆಯಾಗುತ್ತಿದೆ ಎಂದು ಆರೋಪಿಸಿದ್ದಾರೆ. ಜಿಲ್ಲಾಧಿಕಾರಿ ಹಾಗೂ ಸಚಿವರ ಪ್ರತಿಕ್ರಿಯೆಯ ಕೊರತೆಯನ್ನೂ ಪ್ರಶ್ನಿಸಿದ ಅವರು, ಸ್ಥಳೀಯ ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ನಿಷ್ಕ್ರಿಯವಾಗಿದೆ ಎಂದು ದೂರಿದ್ದಾರೆ. ಅನಧಿಕೃತ ಕ್ವಾರಿ ಚಟುವಟಿಕೆಗಳು ನಿಯಂತ್ರಣವಿಲ್ಲದೆ ನಡೆಯುತ್ತಿದ್ದು, ಇದನ್ನು ತಕ್ಷಣ ನಿಯಂತ್ರಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

RELATED ARTICLES
- Advertisment -
Google search engine

Most Popular